ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KSRTC ಚಾಲಕ ಕಂ ನಿರ್ವಾಹಕ ಹುದ್ದೆ: ಮಾರ್ಚ್‌ 6ಕ್ಕೆ ದೇಹದಾರ್ಢ್ಯ ಪರೀಕ್ಷೆ

Published 28 ಫೆಬ್ರುವರಿ 2024, 16:38 IST
Last Updated 28 ಫೆಬ್ರುವರಿ 2024, 16:38 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಮಾರ್ಚ್‌ 6ರಂದು ದೇಹದಾರ್ಢ್ಯ ಪರೀಕ್ಷೆ ನಡೆಯಲಿದೆ.

2000 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮೀಸಲಾತಿ ನಿಯಮಗಳ ಅನ್ವಯ ವರ್ಗವಾರು ಹುದ್ದೆಗಳ ಸಂಖ್ಯೆಯನ್ನು ksrtcjobs.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ವೆಬ್‌ಸೈಟ್‌ನಿಂದ ಕರೆಪತ್ರಗಳನ್ನು ಮಾರ್ಚ್‌ 3ರ ಬಳಿಕ ಡೌನ್‌ಲೋಡ್‌ ಮಾಡಿಕೊಳ್ಳಬೇಕು.

ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲಾತಿ /ದೇಹದಾರ್ಢ್ಯ ಪರಿಶೀಲನೆ ಮಾತ್ರ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ ನಡೆಸುವ ಕುರಿತು ಪ್ರತ್ಯೇಕ ದಿನಾಂಕ / ಸ್ಥಳವನ್ನು ನಿಗದಿಪಡಿಸಲಾಗುವುದು ಎಂದು ಕೆಎಸ್ಆರ್‌ಟಿಸಿ ಆಯ್ಕೆ ಸಮಿತಿ ಅಧ್ಯಕ್ಷರಾಗಿರುವ ಕೆಎಸ್‌ಆರ್‌ಟಿಸಿ ನಿರ್ದೇಶಕಿ (ಸಿಬ್ಬಂದಿ ಮಾತ್ತು ಜಾಗೃತ) ನಂದಿನಿದೇವಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT