ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KSRTC ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ: ಮೇ 15ರಿಂದ ದಾಖಲಾತಿ ಪರಿಶೀಲನೆ

Published 8 ಮೇ 2024, 14:34 IST
Last Updated 8 ಮೇ 2024, 14:34 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ದೇಹದಾರ್ಢ್ಯ ಪರೀಕ್ಷೆಗಳು ಮೇ 15ರಿಂದ ನಡೆಯಲಿದೆ.

ಮಾರ್ಚ್‌ನಲ್ಲಿ ಪರಿಶೀಲನೆ ಆರಂಭವಾಗಿತ್ತು. ಚುನಾವಣೆ ಘೋಷಣೆಯಾದ ಬಳಿಕ ಮುಂದೂಡಲಾಗಿತ್ತು. ಮೇ 15ರಿಂದ ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಮತ್ತೆ ನಡೆಯಲಿದೆ. ಈ ಸಂಬಂಧ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್-ಸೈಟ್ ksrtcjobs.karnataka.gov.in ರಲ್ಲಿ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಎಲ್ಲ ಮೂಲ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ.

ಅರ್ಹರಾದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ ನಡೆಸುವ ಕುರಿತು ಪ್ರತ್ಯೇಕ ದಿನಾಂಕ, ಸ್ಥಳವನ್ನು ನಿಗದಿಪಡಿಸಲಾಗುವುದು. ಹುದ್ದೆಯ ಆಯ್ಕೆಯು ಗಣಕೀಕೃತ ಚಾಲನಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಅರ್ಹತೆ ಹಾಗೂ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ನಡೆಯಲಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT