ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ.15ರಿಂದ 19ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದೆ.

ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಜೊತೆಗೆ ಕಾರ್ಮಿಕರ ಸಮಾವೇಶ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕ್ರಿಯಾಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಹಿಂಬಾಕಿ ನೀಡುವುದು, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಆಗಸ್ಟ್ನಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಹೈಕೋರ್ಟ್ನ ಸೂಚನೆಯ ಮೇರೆಗೆ ಮುಷ್ಕರ ಕೈಬಿಡಲಾಗಿತ್ತು. ಈ ಬಗ್ಗೆ ಮಾತುಕತೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಆದರೆ, ಈವರೆಗೂ ಮಾತುಕತೆ ನಡೆದಿಲ್ಲ ಎಂದು ದೂರಿದ್ದಾರೆ.

ಹೋರಾಟದ ಕುರಿತು ನಡೆದ ಸಭೆಯಲ್ಲಿ ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಪರವಾಗಿ ಎಚ್.ವಿ. ಅನಂತಸುಬ್ಬರಾವ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿಯ ಬಿ. ಜಯದೇವರಾಜೇ ಅರಸ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್ನ ಎಚ್.ಡಿ. ರೇವಪ್ಪ, ಕೆಎಸ್ಆರ್ಟಿಸಿ ಪರಿಶಿಷ್ಟ ಜಾತಿ–ಪಂಗಡ ನೌಕರರ ಸಂಘದ ವೆಂಕಟರಮಣಪ್ಪ, ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಎ. ಸೋಮಣ್ಣ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘದ ಪರವಾಗಿ ಜಗದೀಶ್ ಎಚ್.ಆರ್. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.