ಬೆಂಗಳೂರು: ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು.

ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ₹32 ಕೋಟಿ ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ನೆಲ ಅಂತಸ್ತು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಕೆಳ ಬೇಸ್ಮೆಂಟ್ನಲ್ಲಿ 58 ಕಾರುಗಳು ಹಾಗೂ ಮೇಲಿನ ಬೇಸ್ಮೆಂಟ್ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ.

ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕೆಐಎಡಿಬಿಯ ₹ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಿದರು.

ಹಿಂದೆ ಆರ್.ವಿ. ದೇಶಪಾಂಡೆ ಕೈಗಾರಿಕಾ ಸಚಿವರಾಗಿದ್ದಾಗ ಈ ಕಟ್ಟಡ ಕಟ್ಟಲು ತೀರ್ಮಾನ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಕೆಐಎಡಿಬಿ ಸಿಇಒ ಮಹೇಶ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.