ಶನಿವಾರ, ಆಗಸ್ಟ್ 17, 2019
24 °C

ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ

Published:
Updated:

ಬೆಂಗಳೂರು: ವಿಧಾನಸಭೆಯಲ್ಲಿ ಮಂಡಿಸಿದ ವಿಶ್ವಾಸಮತದಲ್ಲಿ ಬಹುಮತ ಸಾಬೀತಾಗದೆ ಮೈತ್ರಿ ಸರ್ಕಾರ ಪತನವಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಿದರು.

ಕಲಾಪ ಮುಗಿಯುತ್ತಿದ್ದಂತೆ ಸ್ಪೀಕರ್‌ ಭೇಟಿ ಮಾಡಿದ ಕುಮಾರಸ್ವಾಮಿ ಅವರು ಅಲ್ಲಿಂದ ನೇರವಾಗಿ ರಾಜಭವನಕ್ಕೆ ತೆರಳಿದರು. ರಾಜ್ಯಪಾಲರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

ರಾಜೀನಾಮೆ ಸ್ವೀಕರಿಸಿದ ನಂತರ ರಾಜ್ಯಪಾಲರು ಮುಂದಿನ ಸರ್ಕಾರ ಅಸ್ಥಿತ್ವಕ್ಕೆ ಬರುವವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಹೇಳಿದರು. ಬಿಜೆಪಿ ಬಹುಮತ ಸಾಬೀತು ಪಡಿಸಿ, ಅಧಿಕಾರಕ್ಕೆ ಬರುವವರೆಗೆ ಕುಮಾರಸ್ವಾಮಿ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಾರೆ.

 

Post Comments (+)