₹ 10 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
‘ನಗರದ ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಆರೋಪಿಗಳು ಡ್ರಗ್ಸ್ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಭಾನುವಾರ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.
‘ಬಂಧಿತರಿಂದ ₹ 10 ಲಕ್ಷ ಮೌಲ್ಯದ 5 ಕೆ.ಜಿ ಗಾಂಜಾ, 260 ಗ್ರಾಂ ಹ್ಯಾಶಿಷ್, 20 ಎಲ್ಎಸ್ಡಿ ಕಾಗದ ಚೂರು, ಮೂರು ಮೊಬೈಲ್ ಹಾಗೂ ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದೂ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.