ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 1.39 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಕುಮಾರಸ್ವಾಮಿ ಲೇಔಟ್ ಪೊಲೀಸರ ಕಾರ್ಯಾಚರಣೆ
Last Updated 21 ಜನವರಿ 2021, 18:48 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕೆಲ ಕಾಲೇಜು, ಆಸ್ಪತ್ರೆ ಹಾಗೂ ಖಾಸಗಿ ಕಂಪನಿಗಳ ಎದುರು ಡ್ರಗ್ಸ್ ಮಾರುತ್ತಿದ್ದ ಜಾಲವನ್ನು ಭೇದಿಸಿರುವ ಕುಮಾರಸ್ವಾಮಿ ಲೇಔಟ್ ಪೊಲೀಸರು, ₹ 1.39 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿರುವ ಆಸ್ಪತ್ರೆಯೊಂದರ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ಹೋದ ಪೊಲೀಸರ ತಂಡ, ಡ್ರಗ್ಸ್ ಮಾರಾಟ ಜಾಲವನ್ನು ಪತ್ತೆ ಮಾಡಿ ಇಬ್ಬರನ್ನು ಬಂಧಿಸಿದೆ’ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಹೇಳಿದರು.

‘ಬಿ.ಟಿ.ಎಂ ಲೇಔಟ್ ಬಾಲಾಜಿ ನಗರದ ನಿವಾಸಿ ರಾಹುಲ್ ತುಳಸಿರಾಮ್ ಶರ್ಮ (28) ಹಾಗೂ ತಮಿಳುನಾಡು ಸೇಲಂನ ಸಿ. ಬಾಲಾಜಿ (48) ಬಂಧಿತರು. ಇವರ ವಿರುದ್ಧ ಮಾದಕ ವಸ್ತು ನಿಯಂತ್ರಣ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಅವರು ತಿಳಿಸಿದರು.

‘ವ್ಯವಸ್ಥಿತ ಜಾಲ ರೂಪಿಸಿಕೊಂಡಿದ್ದ ಆರೋಪಿಗಳು, ಕಾಗದ ಚೂರು ರೂಪದ ಎಲ್‌ಎಸ್‌ಡಿ ಸೇರಿ ಹಲವು ಬಗೆಯ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಅದರಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು. ಆರೋಪಿ ರಾಹುಲ್ ವಿರುದ್ಧ ಕೋಣನಕುಂಟೆ ಠಾಣೆಯಲ್ಲೂ ಈ ಹಿಂದೆ ಪ್ರಕರಣ ದಾಖಲಾಗಿತ್ತು’ ಎಂದೂ ಹೇಳಿದರು.

‘ಆರೋಪಿಗಳಿಂದ 9,310 ಎಲ್‌ಎಸ್‌ಡಿ ಕಾಗದ ಚೂರು, ಲ್ಯಾಪ್‌ಟಾಪ್, ಮೊಬೈಲ್‌ಗಳು ಹಾಗೂ ₹ 27.50 ಲಕ್ಷ ನಗದನ್ನೂ ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT