ಮಂಗಳವಾರ, ಜನವರಿ 31, 2023
19 °C

ಮಹಾಕುಂಭ ಮೇಳದ ಲೋಗೊ ಬಿಡುಗಡೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳದ ಲೋಗೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬಿಡುಗಡೆ ಮಾಡಿದರು.

ಕೆ.ಆರ್.ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮ ಸ್ಥಳ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಬಾಮೇಳ ಅ.13ರಿಂದ 16ರವರೆಗೆ ನಡೆಯಲಿದೆ. 

ಕುಂಭಮೇಳಕ್ಕೆ ಲಕ್ಷಾಂತರ ಭಕ್ತರು ಬರುತ್ತಾರೆ. ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಸಚಿವ ‌ಡಾ.ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ, ಶಾಸಕ ನಾಗೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.