ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರಮಂಗಲ ಪೊಲೀಸರಿಗೆ ಸಿಕ್ಕಿ ಬಿದ್ದ ಕುಣಿಗಲ್‌ ಗಿರಿ

Last Updated 16 ಜುಲೈ 2019, 19:20 IST
ಅಕ್ಷರ ಗಾತ್ರ

ಬೆಂಗಳೂರು: ಸಿಸಿಬಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕುಖ್ಯಾತ ಕಳ್ಳ ಕುಣಿಗಲ್ ಗಿರಿ ಸೋಮವಾರ ತಡರಾತ್ರಿ ಕೋರಮಂಗಲ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಬಾರ್‌ ಒಂದರಲ್ಲಿ ಗಿರಿ ಮದ್ಯ ಸೇವಿಸುತ್ತಿದ್ದ ಮಾಹಿತಿ ಪಡೆದ ಕೋರಮಂಗಲ ಪೊಲೀಸರು ದಾಳಿ ನಡೆಸಿ, ಗಿರಿಯನ್ನು ಬಂಧಿಸಿದ್ದಾರೆ.

ಹಲವು ಅಪರಾಧಗಳಲ್ಲಿ ಭಾಗಿಯಾಗಿರುವ ಗಿರಿ, ಇತ್ತೀಚೆಗಷ್ಟೇ ರೌಡಿ ಪರೇಡ್‌ಗೆ ಬಂದಿದ್ದ. ಬಳಿಕ ಆತನನ್ನು ಕ್ರಿಕೆಟ್‌ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಜಾಮೀನು ಮೇಲೆ ಬಿಡುಗಡೆಯಾಗಿದ್ದ ಆತ, ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಮುಂದುವರಿಸಿದ್ದ. ಈ ಸಂಬಂಧ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಬಂಧನದ ಭೀತಿಯಲ್ಲಿ ಆತ ತಲೆಮರೆಸಿಕೊಂಡು ಓಡಾಡುತ್ತಿದ್ದ ಎಂದು ಪೊಲೀಸರು ತಿಳಿಸಿದರು.

ನಗರದ ರೆಸಿಡೆನ್ಸಿ ರಸ್ತೆಯಲ್ಲಿರುವ ಡಾನ್ಸ್‌ ಬಾರೊಂದರ ಮೇಲೆ ಜೂನ್ 16ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ವೇಳೆ, ಅಲ್ಲಿದ್ದ ಫ್ರಿಡ್ಜ್‌ನಲ್ಲಿ ಅಡಗಿ ಗಿರಿ ಎಸ್ಕೇಪ್ ಆಗಿದ್ದ. ಅಂದು ರಾತ್ರಿ ಸ್ನೇಹಿತರು ಹಾಗೂ ಸಹಚರರಿಗಾಗಿ ಆ ಡಾನ್ಸ್‌ ಬಾರ್ ನಲ್ಲಿ ಪಾರ್ಟಿ ಏರ್ಪಡಿಸಿದ್ದ. ಪಾರ್ಟಿಯಲ್ಲಿ ನೃತ್ಯ ಮಾಡಲು 266 ಯುವತಿಯರನ್ನೂ ಕರೆಸಿದ್ದ. ಪಾರ್ಟಿ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಬಾರ್‌ ಮೇಲೆ ದಾಳಿ ಮಾಡಿದ್ದ ಸಿಸಿಬಿ ಅಧಿಕಾರಿಗಳು, ಯುವತಿಯರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದರು.

ಗಿರಿಯನ್ನು ಬಂಧಿಸುವಂತೆ ಪೊಲೀಸ್‌ ಕಮಿಷನರ್‌ ಅಲೋಕ್‌ಕುಮಾರ್ ಇತ್ತೀಚೆಗೆ ಸಿಸಿಬಿ ಪೊಲೀಸರಿಗೆ ಸೂಚನೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT