ಬೆಂಗಳೂರು: ‘ಕುರುಬ ಸಮಾಜ ಸಂಘಟಿತವಾಗಿರುವ ಕಾರಣ ಎಲ್ಲ ರಾಜಕೀಯ ಪಕ್ಷಗಳು ನಮ್ಮ ಸಮುದಾಯವನ್ನು ಸೆಳೆಯಲು ಮುಂದಾಗುತ್ತಿವೆ’ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ಹಾಲುಮತ ಉದ್ಯಮಿಗಳ ಸಂಘ ಭಾನುವಾರ ಆಯೋಜಿಸಿದ್ದ ಕನಕೋದ್ಯಮಿಗಳ ಸಮ್ಮಿಲನ ಹಾಗೂ ಉದ್ಯಮಿಗಳಿಗೆ ಅವಕಾಶಗಳ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕನಕದಾಸರ ಜಯಂತಿ ಆಚರಣೆ ಮಾಡಿದ ಪರಿಣಾಮ ನಮ್ಮ ಸಮುದಾಯ ಸಂಘಟಿತವಾಗಿದೆ. ಇತ್ತೀಚೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ‘ನಾನು ಕುರುಬ ಸಮುದಾಯವನ್ನು ಸಂಘಟಿಸುವ ಕೆಲಸ ಮಾಡುತ್ತೇನೆ’ ಎಂಬ ಹೇಳಿಕೆ ನೀಡಿದ್ದಾರೆ. ಎಲ್ಲ ಪಕ್ಷಗಳಲ್ಲಿ ನಮ್ಮ ಸಮುದಾಯದ ನಾಯಕರಿದ್ದಾರೆ. ಕುರುಬ ಸಮುದಾಯದ ನಾಯಕರನ್ನು ಬೆಳೆಸುವ ಕೆಲಸ ಆಗಬೇಕು. ಪಕ್ಷ ಅಥವಾ ಸಮುದಾಯ ಅಂತ ಬಂದಾಗ ನಾನು ಸಮಾಜದ ಪರವಾಗಿ ಕೆಲಸ ಮಾಡುತ್ತೇನೆ’ ಎಂದರು.

‘ಕುರುಬ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರೆ ನಮ್ಮ ಸಮುದಾಯದ ಉದ್ಯಮಿಗಳಿಗೆ ಸರ್ಕಾರದ ಅನೇಕ ಸೌಲಭ್ಯಗಳು ದೊರೆಯುತ್ತಿದ್ದವು. ಈ ನಿಟ್ಟಿನಲ್ಲಿ ಹೋರಾಟ ನಡೆಯುತ್ತಿದೆ’ ಎಂದು ತಿಳಿಸಿದರು.

‘ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) ಹಂಚಿಕೆ ಮಾಡುವ ನಿವೇಶನಗಳಲ್ಲಿ ಕುರುಬ ಸಮುದಾಯಕ್ಕೆ ಕೆಲ ನಿವೇಶನಗಳನ್ನು ಮೀಸಲಿಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಜಾರಿಗೊಳಿಸಲು ಹೊರಟಿರುವ ನೂತನ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವಂತೆ ಪೀಣ್ಯ ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷ ಆರ್. ಶಿವಕುಮಾರ್ ಅವರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಎಚ್.ಎಂ. ರೇವಣ್ಣ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೊಂದಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

‘ಗ್ಯಾರಂಟಿ ಬಂದ್ ಮಾಡಿ ನೌಕರಿ ಕೊಡಿ’

‘ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿ ಮನೆಗೊಂದು ನೌಕರಿ ಕೊಡುತ್ತೇವೆ ಎಂಬ ಭರವಸೆ ನೀಡಬೇಕು’ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಒತ್ತಾಯಿಸಿದರು.

‘ಎಲ್ಲ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿ ನಿರುದ್ಯೋಗಿಗಳಿಗೆ ನೌಕರಿ ನೀಡಿದರೆ ಎಲ್ಲರೂ ಸಂತೋಷದಿಂದ ಇರುತ್ತಾರೆ. ಮೊದಲು ನಾವು ಈ ಯೋಜನೆಗಳಿಗೆ ವಿರೋಧ ಮಾಡಿದ್ದೇವೆ. ಆದರೆ ಚುನಾವಣೆಯ ಸಂದರ್ಭದಲ್ಲಿ ಮತಕ್ಕಾಗಿ ಇಂತಹ ಯೋಜನೆಗಳನ್ನು ಜಾರಿ ಮಾಡುವ ಭರವಸೆ ನೀಡುತ್ತಿದ್ದೇವೆ’ ಎಂದು ತಿಳಿಸಿದರು.

‘ಗ್ರಾಮೀಣ ಭಾಗದಲ್ಲಿರುವ ನಮ್ಮ ಸಮುದಾಯದ ಯುವಕರಿಗೆ ಉದ್ಯಮಿಗಳಾಗುವ ನಿಟ್ಟಿನಲ್ಲಿ ಕೌಶಲ ತರಬೇತಿ ನೀಡಬೇಕು. ನವೋದ್ಯಮಿಗಳಿಗೆ ಹಲವಾರು ಅವಕಾಶಗಳಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.