ಶನಿವಾರ, ಡಿಸೆಂಬರ್ 5, 2020
25 °C

ಬಣರಹಿತವಾಗಿ ಕುರುಬರ ಅಭಿವೃದ್ಧಿ: ಜಿ. ಕೃಷ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕುರುಬರ ಸಂಘದಲ್ಲಿ ಬಣಗಳನ್ನು ಹುಟ್ಟುಹಾಕದೆ ಭಿನ್ನಾಭಿಪ್ರಾಯರಹಿತವಾಗಿ ಸಮಾಜದ ಏಳಿಗೆಗಾಗಿ ಕೆಲಸ ಮಾಡುತ್ತೇವೆ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನೂತನ ಅಧ್ಯಕ್ಷ ಜಿ. ಕೃಷ್ಣ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಕುರುಬ ಸಮಾಜದ  ಶಾಲೆ, ಕಾಲೇಜುಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಾಜ್ಯದ ಎಲ್ಲಾ ತಾಲ್ಲೂಕುಗಳಿಗೆ ತೆರಳಿ ಸಂಘದ ಚಟುವಟಿಕೆ ಚುರುಕುಗೊಳಿಸಲಾಗುವುದು’ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಡಿ.ವೆಂಕಟೇಶಮೂರ್ತಿ, ‘ಚುನಾವಣೆ ತನಕ ಸಂಘದಲ್ಲಿ ಬಣಗಳು ಇರುವುದು ಸಹಜ. ಸಮಾಜ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಒಟ್ಟಾಗಿ ಮುಂದುವರಿಯುವ ಆಗತ್ಯವಿದ್ದು, ನಮ್ಮಲ್ಲಿ ಯಾವುದೇ ರೀತಿಯ ಬಣವಿಲ್ಲ. ಎಲ್ಲ ನಾಯಕರ ಸಹಕಾರದೊಂದಿಗೆ ಕೆಲಸ ಮಾಡುತ್ತೇವೆ’ ಎಂದರು.

ಈ ಹಿಂದಿನ ಕಾರ್ಯಾಧ್ಯಕ್ಷ ಶಾಂತಪ್ಪ, ‘ಕುರುಬ ಸಮಾಜ ಒಂದು ಪಕ್ಷಕ್ಕೆ ಸೀಮಿತಗೊಳ್ಳದೆ ಎಲ್ಲಾ ಪಕ್ಷದ ಜತೆ ಸಮನ್ವಯ ಕಾಪಾಡಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು