ಬೆಂಗಳೂರು:ರಾಜ್ಯ ಕುರುಬರ ಸಂಘದ ಅಧ್ಯಕ್ಷರಾಗಿ ಜಿ. ಕೃಷ್ಣ ಹಾಗೂ ಬಿಬಿಎಂಪಿಯ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಾಧ್ಯಕ್ಷರಾಗಿ ಸುಬ್ರಹ್ಮಣ್ಯ ಮತ್ತು ಖಜಾಂಚಿಯಾಗಿ ದೇವರಾಜ್ ಚುನಾಯಿತರಾಗಿದ್ದಾರೆ.

ಪದಾಧಿಕಾರಿಗಳ ಆಯ್ಕೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಣ ಭಾರೀ ಗೆಲುವು ಸಾಧಿಸಿದೆ.

ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂದು ಸಚಿವಕೆ.ಎಸ್.ಈಶ್ವರಪ್ಪ ಬಣ ಕೂಡ ಭಾರೀ ಪ್ರಯತ್ನ ನಡೆಸಿತ್ತು. ತೆರೆಮರೆಯಲ್ಲಿ ಸಂಧಾನ ಮಾತುಕತೆಗಳು ನಡೆದಿದ್ದರೂ ಫಲಪ್ರದವಾಗಲಿಲ್ಲ. ಕೊನೆಗೆ, ಸಿದ್ದರಾಮಯ್ಯ ಬಣದ ಮುಖಂಡರೇ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಮುಖಂಡರೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.