ಬೆಂಗಳೂರು: ‘ಕುವೆಂಪು ಅವರು ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸಿದ್ದರು. ಜೊತೆಗೆ ತಮ್ಮ ಅಗಾಧ ಪಾಂಡಿತ್ಯದ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ’ ಎಂದು ಬಿ.ಎಂ.ಶ್ರೀ ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ ಹೇಳಿದರು.

ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ವೈಜ್ಞಾನಿಕ, ವೈಚಾರಿಕ ಸಾಹಿತ್ಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿಶ್ವವನ್ನು ಆಳುವುದು ವೈಚಾರಿಕತೆಯೇ ಹೊರತು ವ್ಯಕ್ತಿ ಅಥವಾ ನಂಬಿಕೆಗಳಲ್ಲ. ಕುವೆಂಪು ಇಂದು ನಮ್ಮ ನಡುವೆ ಇಲ್ಲದಿದ್ದರೂ ಅವರ ವೈಚಾರಿಕ ಚಿಂತನೆಗಳು ಮತ್ತು ವಿಶ್ವಮಾನವ ಸಂದೇಶ ಇಂದಿಗೂ ಜೀವಂತವಾಗಿದೆ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಯುವ ಸಾಹಿತಿ ಆಶಾ ಶಿವುಗೌಡ ಹಾಗೂ ವಿಜ್ಞಾನ ಲೇಖಕ ಹಾಗೂ ಸಮಾವೇಶದ ಸರ್ವಾಧ್ಯಕ್ಷ ಆರ್.ಎಸ್. ರವೀಂದ್ರ ಅವರಿಗೆ ಪುನೀತ್ ರಾಜಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಲೇಖಕ ಶಶಿಕಾಂತ್ ರಾವ್, ಟ್ರಸ್ಟ್ನ ಅಧ್ಯಕ್ಷ ಎಸ್. ರಾಮಲಿಂಗೇಶ್ವರ, ಕಾರ್ಯದರ್ಶಿ ಸಿ. ಹೇಮಾವತಿ, ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನ ಇಂದಿರಾ ಕೃಷ್ಣಪ್ಪ, ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಕೃಷ್ಣ ಹಾನ್ಬಾಳ್, ಆರ್. ವಾದಿರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.