ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಹಿತ ರಕ್ಷಣೆಗೆ ಮುಂಬೈನಲ್ಲಿ ಸಹಾಯ ಕೇಂದ್ರ

ಶೀಘ್ರ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ
Last Updated 19 ಅಕ್ಟೋಬರ್ 2019, 18:52 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬೈಯಲ್ಲಿ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿರುವ ಉತ್ತರ ಕರ್ನಾಟಕ ಭಾಗದ ಜನರ ಹಿತ ಕಾಯುವುದಕ್ಕಾಗಿ ಸಹಾಯ ಕೇಂದ್ರ ಆರಂಭವಾಗಲಿದೆ.

ಈ ಸಂಬಂಧ ಮಹಾರಾಷ್ಟ್ರ ಸರ್ಕಾರದ ಜತೆಗೆ ರಾಜ್ಯ ಸರ್ಕಾರ ಒಪ್ಪಂದವೊಂದನ್ನು ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ. ಮುಂಬೈನಲ್ಲಿ ಸಹಾಯ ಕೇಂದ್ರ ತೆರೆದು, ರಾಜ್ಯದ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಚಿಂತನೆ.

ಈ ಕುರಿತು ಚರ್ಚಿಸಲು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಅವರು ಶನಿವಾರ ಮುಂಬೈಗೆ ಭೇಟಿ ನೀಡಿದ್ದಾರೆ. ಮಹಾರಾಷ್ಟ್ರದ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಅವರ ಜತೆಗೆ ಶೀಘ್ರಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಹಿನ್ನೆಲೆ: ಉತ್ತರ ಕರ್ನಾಟಕದ ನೆರೆ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳೂ ನೆರವಾಗಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದರು.ಕಾರ್ಮಿಕ ಸಚಿವ ಎಸ್‌. ಸುರೇಶ್‌ ಕುಮಾರ್ ಅವರು ಇದಕ್ಕೆ ಸ್ಪಂದಿಸಿ, ಈ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT