ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರ ಕಾರ್ಮಿಕರೇ ಸ್ವಚ್ಛತಾ ರಾಯಭಾರಿಗಳು

Last Updated 10 ಮಾರ್ಚ್ 2019, 19:38 IST
ಅಕ್ಷರ ಗಾತ್ರ

ನಗರದ ಸ್ವಚ್ಛತಾ ರಾಯಭಾರಿ ಮಹಿಳಾ ಪೌರ ಕಾರ್ಮಿಕರೊಂದಿಗೆ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನದಲ್ಲಿ ಭಾನುವಾರ ಅರ್ಥಪೂರ್ಣ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು. ಮಹಿಳಾ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಒತ್ತು ನೀಡಿ ಮಾಸ್ಕ್, ವಿವಿಧ ರಕ್ಷಣಾ ಕವಚಗಳನ್ನೊಂಡ ಆರೋಗ್ಯ ಕಿಟ್ ವಿತರಿಸಲಾಯಿತು.

‘ನಗರದ ಆರೋಗ್ಯ ರಕ್ಷಣೆಗೆ ಟೊಂಕಕಟ್ಟಿ ನಿಂತಿರುವ ಮಹಿಳಾ ಪೌರ ಕಾರ್ಮಿಕರು ಸ್ವಚ್ಛ, ಸುಂದರ ಬೆಂಗಳೂರು ನಿರ್ಮಾಣ ಮಾಡುವ ನಿಜವಾದ ಸ್ವಚ್ಛತಾ ರಾಯಭಾರಿಗಳಾಗಿದ್ದಾರೆ. ಇವರ ಆರೋಗ್ಯ ರಕ್ಷಣೆ ನಮ್ಮೆಲ್ಲರ ಹೊಣೆ. ಇದೇ ಉದ್ದೇಶದಿಂದ ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಯೂಟದ ಸೌಲಭ್ಯ ಕಲ್ಪಿಸಲಾಗುತ್ತಿದೆ. ಆರೋಗ್ಯ ವಿಮೆ, ಪೌರ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ನೆರವು. ಪಾಲಿಕೆ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಪೌರ ಕಾರ್ಮಿಕರ ಪರಿಶ್ರಮದಿಂದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರು ನಗರ 22 ಅಂಕಗಳ ಬಡ್ತಿ ಪಡೆದು ಉತ್ತಮ ಸಾಧನೆಮಾಡಿದೆ’ ಎಂದುಮಹಿಳಾ ಪೌರ ಕಾರ್ಮಿಕರನ್ನು ಸನ್ಮಾನಿಸಿದ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮೆಚ್ಚುಗೆ ವ್ಯಕ್ತಪಡಿಸಿದರು.

‘ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ವಚ್ಛತೆಗೆ ವಿಶೇಷ ಗಮನಹರಿಸಲಾಗಿದೆ. ಎಲ್ಲಾ ವಾರ್ಡ್‌ಗಳ ಪಾಲಿಕೆ ಸದಸ್ಯರು ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದಾರೆ. ಇಡೀ ಬೆಂಗಳೂರಿನಲ್ಲಿ ಜಯನಗರ ಸ್ವಚ್ಚತೆಗೆ ಹೆಸರುವಾಸಿಯಾಗಬೇಕು ಎಂಬ ಗುರಿಯಿದೆ. ಸ್ವಚ್ಛತೆಯಿಂದ ಆರೋಗ್ಯ, ಆರೋಗ್ಯದಿಂದ ಸಮೃದ್ಧಿ ದೊರೆಯುತ್ತದೆ‘ ಎಂದು ಶಾಸಕಿ ಸೌಮ್ಯಾ ರೆಡ್ಡಿ ಹೇಳಿದರು.

ಭೈರಸಂದ್ರ ವಾರ್ಡ್‌ನ ಪಾಲಿಕೆ ಸದಸ್ಯ ನಾಗರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT