ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಣಗಾಪುರ ದತ್ತಾತ್ರೇಯ ದೇಗುಲ ಮೂಲಸೌಕರ್ಯ ಕೊರತೆ: ಸರ್ಕಾರಕ್ಕೆ ನೋಟಿಸ್

ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶ
Published 28 ಫೆಬ್ರುವರಿ 2024, 1:10 IST
Last Updated 28 ಫೆಬ್ರುವರಿ 2024, 1:10 IST
ಅಕ್ಷರ ಗಾತ್ರ

ಬೆಂಗಳೂರು: ಕಲಬುರಗಿ ಜಿಲ್ಲೆಯ ಗಾಣಗಾಪುರದ ಪ್ರಸಿದ್ಧ ಶ್ರೀ ದತ್ತಾತ್ರೇಯ ದೇವಾಲಯಕ್ಕೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ವಾಸ್ತುಶಿಲ್ಪಿ ಹಾಗೂ ಸಾಮಾಜಿಕ ಕಾರ್ಯಕರ್ತ ಎಂ. ಶರಣ್‌ ದೇಸಾಯಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಧಾನ ಮಂತ್ರಿಯವರ ಪ್ರಧಾನ ಕಾಯದರ್ಶಿ, ದೇವಸ್ಥಾನದ ಅಭಿವೃದ್ಧಿ ಸಮಿತಿ ಮುಖ್ಯಸ್ಥರೂ ಆದ ಕಲಬುರಗಿ ಜಿಲ್ಲಾಧಿಕಾರಿ, ರಾಜ್ಯ ಮುಜರಾಯಿ ಇಲಾಖೆ ಆಯುಕ್ತರು ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ಅರ್ಜಿಯಲ್ಲಿ ಅಫ್ಜಲಪುರ ಶಾಸಕ ಎಂ.ವೈ.ಪಾಟೀಲ್‌ ಅವರನ್ನೂ ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಆಕ್ಷೇಪಣೆ ಏನು?:

'ದೇವಸ್ಥಾನದ ಆವರಣದಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳು ಇಲ್ಲ. ಯಾತ್ರಿಕರಿಗೆ ಹೊಸ ವಸತಿ ಕಟ್ಟಡಗಳನ್ನು ನಿರ್ಮಿಸಿಕೊಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ವಸತಿ, ಶುದ್ಧ ಕುಡಿಯುವ ನೀರು, ಆಸ್ಪತ್ರೆ ಹಾಗೂ ಶೌಚಾಲಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಯೋಜನೆ ಕೈಗೊಂಡಿಲ್ಲ. ರಾಜ್ಯ ಸರ್ಕಾರ ದೇವಸ್ಥಾನದ ಅಭಿವೃದ್ಧಿಗೆ ನೀಡಿದ ಅನುದಾನವನ್ನು ರಾಜಕೀಯ ನಾಯಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT