ಬುಧವಾರ, ಜುಲೈ 28, 2021
28 °C

ರಾಜಧಾನಿಯಲ್ಲಿ ಲಾಕ್‌ಡೌನ್ | ಸಂಚಾರ ವಿರಳ: ರಸ್ತೆಗಿಳಿದವರ ವಾಹನ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್‌ಡೌನ್ ಮೊದಲ ದಿನ ಕೆಲವೆಡೆ ವಾಹನಗಳ ಸಂಚಾರ ವಿರಳವಾಗಿದ್ದರೆ, ಮತ್ತೆ ಕೆಲವೆಡೆ ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ಕೆಲವರು ರಸ್ತೆಗೆ ಇಳಿದ್ದಾರೆ.

ಮಂಗಳವಾರ ರಾತ್ರಿಯೇ ಎಲ್ಲೆಡೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಕೆಲವು ಫ್ಲೈಓವರ್‌ ಮತ್ತು ಅಂಡರ್ ಪಾಸ್‌ಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಹೆಬ್ಬಾಳ ಮತ್ತು ವಿಮಾನ ನಿಲ್ದಾಣ ರಸ್ತೆಯಲ್ಲಿನ ಫ್ಲೈಓವರ್‌ನಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆಬ್ಬಾಳದಿಂದ ಗೊರಗುಂಟೆ ಪಾಳ್ಯಕ್ಕೆ ಸಂಪರ್ಕಿಸುವ ರಸ್ತೆಯಲ್ಲಿನ ಫ್ಲೈಓವರ್ ಮತ್ತು ಅಂಡರ್ ಪಾಸ್‌ಗಳಲ್ಲಿ ಸಂಚಾರಕ್ಕೆ ಎಂದಿನಂತೆ ಅವಕಾಶ ಇದೆ.

ಪೊಲೀಸರು ಅಲ್ಲಲ್ಲಿ ವಾಹನಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅನಗತ್ಯವಾಗಿ ರಸ್ತೆಗೆ ಇಳಿದವರಿಗೆ ಬುದ್ದಿವಾದ ಹೇಳಿ ವಾಪಸ್ ಕಳುಹಿಸುತ್ತಿದ್ದಾರೆ. ವೈದ್ಯಕೀಯ ಮತ್ತು ಅಗತ್ಯ ಸೇವೆ ಒದಗಿಸುವ ಸಿಬ್ಬಂದಿಗಾಗಿ ಅಲ್ಲಲ್ಲಿ ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿವೆ.

ಅಗತ್ಯ ವಸ್ತುಗಳ ಮಾರಾಟ, ಪೆಟ್ರೋಲ್ ಬಂಕ್‌ಗಳು ಆರಂಭವಾಗಿವೆ. ಬೆಳಿಗ್ಗೆ 5ರಿಂದ 12 ಗಂಟೆ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿತ್ತು. 12ರ ನಂತರ ಮುಲಾಜಿಲದಲ್ಲದೇ ಪ್ರಕರಣ ದಾಖಲಿಸಲು ಪೊಲೀಸರು ಸಜ್ಜಾಗಿದ್ದಾರೆ. 

ವಾಹನಗಳು ವಶ

ನಗರದೊಳಕ್ಕೆ ಅನಗತ್ಯವಾಗಿ ಪ್ರವೇಶಿಸಲು ಯತ್ನಿಸುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆಯುವ ಕಾರ್ಯ ಆರಂಭಿಸಿದ್ದಾರೆ.

ತುಮಕೂರು ರಸ್ತೆ ಫ್ಲೈಓವರ್‌ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಸರ್ವೀಸ್ ರಸ್ತೆಯಲ್ಲಿ ಬರುವ ವಾಹನಗಳನ್ನು 8ನೇ ಮೈಲಿ ಬಳಿ ತಡೆಯುತ್ತಿರುವ ಪೊಲೀಸರು, ಸವಾರರ ಗುರುತಿನ ಚೀಟಿ ಪರಿಶೀಲಿಸುತ್ತಿದ್ದಾರೆ. ಅಗತ್ಯ ಸೇವೆ ಹೊರತುಪಡಿಸಿ ಅನಗತ್ಯ ಸಂಚಾರ ಎನಿಸುವ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು