ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ರದ್ದು

Last Updated 16 ಜುಲೈ 2021, 21:06 IST
ಅಕ್ಷರ ಗಾತ್ರ

ಬೆಂಗಳೂರು: ಲಾಲ್‌ಬಾಗ್‌ ಉದ್ಯಾನದಲ್ಲಿ ಈ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ‘ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ’ ಕೋವಿಡ್ ಕಾರಣದಿಂದ ರದ್ದಾಗಿದೆ.

ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘಗಳು ವರ್ಷಕ್ಕೆ ಎರಡು ಬಾರಿ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತಿದ್ದವು.

ಕೋವಿಡ್‌ ತೀವ್ರಗೊಂಡಿರುವ ಸ್ಥಿತಿಯಲ್ಲಿ ಪ್ರದರ್ಶನಕ್ಕೆ ಹೆಚ್ಚು ಜನ ಸೇರುವುದು ಅ‍ಪಾಯ ಎಂಬ ಉದ್ದೇಶದಿಂದ ಕಳೆದ ಆಗಸ್ಟ್‌ನಲ್ಲಿ ಹಾಗೂ ಜನವರಿಯಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ‍ ಪ್ರದರ್ಶನಗಳು ರದ್ದಾಗಿದ್ದವು.

ಎರಡನೇ ಅಲೆಯ ತೀವ್ರತೆ ತಗ್ಗಿದ್ದರಿಂದ ಆಗಸ್ಟ್‌ನಲ್ಲಿ ಪ್ರದರ್ಶನ ಆಯೋಜಿಸುವ ಉದ್ದೇಶವೂ ಹೊಂದಿತ್ತು. ಆದರೆ, ಮೂರನೇ ಅಲೆಯ ಬಗ್ಗೆ ತಜ್ಞರು ಸುಳಿವು ನೀಡಿರುವುದಿಂದ ಈ ಬಾರಿಯೂ ಪ್ರದರ್ಶನ ನಡೆಸದಿರಲು ನಿರ್ಧರಿಸಲಾಗಿದೆ.

‘ಆಗಸ್ಟ್‌ನಲ್ಲಿ ಪ್ರದರ್ಶನ ನಡೆಸಲು ಬಹುತೇಕ ಸಿದ್ಧತೆಗಳು ಅಂತಿಮ ಹಂತ ತಲುಪಿರುತ್ತಿತ್ತು. ಕೋವಿಡ್ ಮೂರನೇ ಅಲೆಯ ಸಂಭವ ಇರುವುದರಿಂದ ಫಲಪುಷ್ಪ ಪ್ರದರ್ಶನಕ್ಕೆ ಯಾವುದೇ ತಯಾರಿ ನಡೆದಿಲ್ಲ. ಪ್ರದರ್ಶನ ನಡೆಯುವುದು ಬಹುತೇಕ ಅನುಮಾನ. ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘದ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಈ ನಿರ್ಣಯ ಅಂತಿಮಗೊಳ್ಳಲಿದೆ’ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT