ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಾಗಿ ಅರಳಲಿರುವ ಜಯಚಾಮರಾಜ ಒಡೆಯರ್?

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ
Last Updated 15 ಜುಲೈ 2019, 19:47 IST
ಅಕ್ಷರ ಗಾತ್ರ

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಈ ಬಾರಿ ಮೈಸೂರಿನ ಯದುವಂಶದ ಕೊನೆಯ ಮಹಾರಾಜ ಜಯಚಾಮರಾಜ ಒಡೆಯರ್ ಬದುಕನ್ನು ಬಿಂಬಿಸುವ ಫಲಪುಷ್ಪ ಪ್ರದರ್ಶನ ಏರ್ಪಡಿಸಲು ತೋಟಗಾರಿಕೆ ಇಲಾಖೆ ಚಿಂತನೆ ನಡೆಸಿದೆ.

ಆಗಸ್ಟ್‌ 9ರಿಂದ 18ರವರೆಗೆ ಫಲಪುಷ್ಪ ಪ್ರದರ್ಶನ ನಡೆಸಲು ಲಾಲ್‌ಬಾಗ್‌ನಲ್ಲಿ ಸಿದ್ಧತೆಗಳು ನಡೆದಿವೆ. ಆಗಸ್ಟ್‌ 18ರಂದು ಜಯಚಾಮರಾಜ ಒಡೆಯರ್ ಅವರ 100ನೇ ಜನ್ಮದಿನ. ಹಾಗಾಗಿ ಹೂವಿನ ರಚನೆಗಳ ಮೂಲಕ ಅವರ ಜೀವನ ಚಿತ್ರಣವನ್ನು ಕಟ್ಟಿಕೊಡುವಂತಹ ಉದ್ದೇಶವಿದೆ ಎಂದು ತೋಟಗಾರಿಕಾ ಇಲಾಖೆ ಮೂಲಗಳು ತಿಳಿಸಿವೆ.

‘ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರೇ ಈ ಕುರಿತು ಸೂಚನೆ ನೀಡಿದ್ದಾರೆ. ಈ ಸಂಬಂಧ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂಮೈಸೂರು ಉದ್ಯಾನ ಕಲಾಸಂಘದ ಜೊತೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೆಸರು ಬಹಿರಂಗಪಡಿಸಲು ಬಯಸದ ತೋಟಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT