ಈ ಪ್ರದರ್ಶನ ಆಗಸ್ಟ್ 16ರವರೆಗೆ ನಡೆಯಲಿದೆ
ಪ್ರಜಾವಾಣಿ ಚಿತ್ರ: ರಂಜು ಪಿ.
218ನೇ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು
ಪ್ರಜಾವಾಣಿ ಚಿತ್ರ: ರಂಜು ಪಿ.
ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳು ರಾರಾಜಿಸುತ್ತಿವೆ.
ಪ್ರಜಾವಾಣಿ ಚಿತ್ರ: ರಂಜು ಪಿ.
ಕಿತ್ತೂರು ಕೋಟೆ ಮಾದರಿಯನ್ನು 1.5 ಲಕ್ಷ ಡಚ್ ಗುಲಾಬಿ ಹೂವು, 1.5 ಲಕ್ಷ ಹೈಬ್ರಿಡ್ ಸೇವಂತಿಗೆ ಹಾಗೂ 30 ಸಾವಿರ ಕೋಲ್ಕತ್ತ ಸೇವಂತಿಗೆ ಹೂವುಗಳನ್ನು ಬಳಸಿಕೊಂಡು ಈ ಪರಿಕಲ್ಪನೆ ಸಿದ್ಧಪಡಿಸಲಾಗಿದೆ.
ಪ್ರಜಾವಾಣಿ ಚಿತ್ರ: ರಂಜು ಪಿ.
ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಕಾರ್ಯಕ್ಷೇತ್ರವಾಗಿದ್ದ ಕಿತ್ತೂರು ಕೋಟೆ ಮಾದರಿಯು ಪುಷ್ಪಗಳಲ್ಲಿ ಅನಾವರಣಗೊಂಡಿದೆ.
ಪ್ರಜಾವಾಣಿ ಚಿತ್ರ: ರಂಜು ಪಿ.
ವಿದೇಶಿ ಪ್ರವಾಸಿಗರೂ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡು ಫೋಟೊ ಕ್ಲಿಕ್ಕಿಸಿಕೊಂಡರು
ಪ್ರಜಾವಾಣಿ ಚಿತ್ರ: ರಂಜು ಪಿ.
‘ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ
ಪ್ರಜಾವಾಣಿ ಚಿತ್ರ: ರಂಜು ಪಿ.
ಗಾಜಿನ ಮನೆಯ ಪ್ರವೇಶ ದ್ವಾರದ ಭಾಗದಲ್ಲಿ 1.75 ಲಕ್ಷಕ್ಕೂ ಹೆಚ್ಚಿನ ಹೂವು ಮತ್ತು ಎಲೆ ಜಾತಿಯ ಗಿಡಗಳನ್ನು ಪ್ರದರ್ಶಿಸಲಾಗಿದೆ.
ಪ್ರಜಾವಾಣಿ ಚಿತ್ರ: ರಂಜು ಪಿ.
ಗಾಜಿನ ಮನೆಯ ಹಿಂಭಾಗದಲ್ಲಿ ರಾಣಿ ಅಬ್ಬಕ್ಕ ದೇವಿ, ಚೆನ್ನಾ ಭೈರಾದೇವಿ, ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮ, ವೀರಮ್ಮಾಜಿ, ಒನಕೆ ಓಬವ್ವನವರ ಪ್ರತಿಮೆಗಳು ರಾರಾಜಿಸುತ್ತಿವೆ
ಪ್ರಜಾವಾಣಿ ಚಿತ್ರ: ರಂಜು ಪಿ.
ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡರು
ಪ್ರಜಾವಾಣಿ ಚಿತ್ರ: ರಂಜು ಪಿ.
ಮೊದಲ ದಿನ ವಯಸ್ಕರು, ಮಕ್ಕಳೂ ಸೇರಿ 14,317 ಮಂದಿ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ್ದಾರೆ
ಪ್ರಜಾವಾಣಿ ಚಿತ್ರ: ರಂಜು ಪಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.