ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಸಾವಯವ, ಸಿರಿಧಾನ್ಯ ಮೇಳ

Last Updated 1 ಮೇ 2019, 19:38 IST
ಅಕ್ಷರ ಗಾತ್ರ

ಬೆಂಗಳೂರು:ಗ್ರಾಮೀಣ ಕುಟುಂಬ ಸಂಸ್ಥೆ ವತಿಯಿಂದ ಇದೇ 3ರಿಂದ 5ರವರೆಗೆ ಲಾಲ್‌ಬಾಗ್‌ನಲ್ಲಿ ಸಿರಿಧಾನ್ಯ ವೈಭವ ಹಾಗೂ ಸಾವಯವ ಆಹಾರ ಮೇಳ ಆಯೋಜಿಸಲಾಗಿದೆ.

‘ಉತ್ತಮ ಆರೋಗ್ಯದ ಪರಿಣಾಮಗಳನ್ನು ಹೊಂದಿರುವ ಸಿರಿಧಾನ್ಯಗಳನ್ನು ಬೆಳೆಯಲು ಮತ್ತು ಬೆಳೆಸುವುದಕ್ಕೆ ಅರಿವು ಮೂಡಿಸಲು ಈ ಮೇಳ ಆಯೋಜಿಸಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಎಂ.ಎಚ್‌. ಶ್ರೀಧರಮೂರ್ತಿ ಹೇಳಿದರು.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರು ಇದೇ 3ರ ಬೆಳಿಗ್ಗೆ 11 ಗಂಟೆಗೆ ಮೇಳ ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಪರಿಸರ ತಜ್ಞ ನಾಗೇಶ ಹೆಗಡೆ ಪಾಲ್ಗೊಳ್ಳಲಿದ್ದಾರೆ‘ ಎಂದು ತಿಳಿಸಿದರು.

‘4ರ ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯ ಹಾಗೂ ಕಾಡು ಕೃಷಿ ಕುರಿತು ವಿಶೇಷ ತರಬೇತಿ ನೀಡಲಾಗುವುದು ಹಾಗೂ ಮಧ್ಯಾಹ್ನ 2.30ಕ್ಕೆ ಸಿರಿಧಾನ್ಯ ಅಡುಗೆ ಸ್ಪರ್ಧೆ ನಡೆಯಲಿದೆ. 5ರಂದು ಬೆಳಿಗ್ಗೆ ಮರಿಗೌಡ ಸ್ಮಾರಕ ಭವನದಲ್ಲಿ ಸಿರಿಧಾನ್ಯಗಳ ಬಳಕೆ ಉಪಯುಕ್ತ ಮತ್ತು ಜಾಗೃತಿ ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಆಹಾರ ತಜ್ಞ ಡಾ.ಖಾದರ್‌ ಅವರು ನಡೆಸಿಕೊಡಲಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT