ಬೆಂಗಳೂರು: ಲಾಲ್ಬಾಗ್ ಉದ್ಯಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸುರಂಗ ರಸ್ತೆಯ ಮಾರ್ಗವನ್ನು ಬದಲು ಮಾಡುವ ಇಂಗಿತವನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದ್ದರೆ, ಸುರಂಗ ರಸ್ತೆ ಯೋಜನೆಯನ್ನು ಯಾವುದೇ ಕಾರಣಕ್ಕೂ ಅನುಷ್ಠಾನ ಮಾಡಬಾರದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ‘ನುರಿತ ತಜ್ಞರು ಅಭಿಪ್ರಾಯ ಪಡೆದು ಕೆಲಸ ಆರಂಭ ಮಾಡುತ್ತಾರೋ ಇಲ್ಲವೋ’ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಪರ್ಯಾಯದತ್ತ ಆಲೋಚನೆ: ಡಿಕೆಶಿ

‘ಶುಕ್ರವಾರ ರಾತ್ರಿ ಲಾಲ್ಬಾಗ್ ಬಳಿ ತೆರಳಿ ಎಲ್ಲೆಲ್ಲಿ ಸುರಂಗ ರಸ್ತೆಗೆ ಪ್ರವೇಶ ಕಲ್ಪಿಸಬಹುದು ಎಂದು ಪರಿಶೀಲನೆ ಮಾಡಿದ್ದೇನೆ. ಪರ್ಯಾಯ ಮಾರ್ಗಗಳ ಬಗ್ಗೆ ಆಲೋಚನೆ ನಡೆಸುತ್ತಿದ್ದೇನೆ. ಯಾವುದೇ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ಸುರಂಗ ರಸ್ತೆ ವಿಚಾರದಲ್ಲಿ ಆರ್. ಅಶೋಕ ಅವರ ನೇತೃತ್ವದಲ್ಲೇ ಸಮಿತಿ ರಚಿಸಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ಬಾಗ್ ಬಳಿ ಪ್ರವೇಶ– ನಿರ್ಗಮನ ತಾಣ ರೂಪಿಸಲಾಗುವುದು’ ಎಂದು ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದರು.

‘ಅಶೋಕ ಅವರು ಧರಣಿ ಕೂರುವ ಅವಶ್ಯ ಇಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಸುರಂಗ ರಸ್ತೆ ಯೋಜನೆಯನ್ನು ಅವರೂ ಗಮನಿಸಲಿ. ಶಾಸಕ ಅಶ್ವತ್ಥ ನಾರಾಯಣ ಸೇರಿದಂತೆ ಬೇರೆ ಯಾರ ಹೆಸರನ್ನು ಸೂಚಿಸಿದರೂ ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ’ ಎಂದರು.

ಲಾಲ್ಬಾಗ್ನಲ್ಲಿ ಇಂದು ಧರಣಿ: ಅಶೋಕ

‘ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್ಬಾಗ್ನಲ್ಲಿ ಬಿಜೆಪಿ ಶಾಸಕರು ಹಾಗೂ ವಿವಿಧ ಸಂಘಟನೆಗಳೊಂದಿಗೆ ನವೆಂಬರ್ 2ರ ಬೆಳಿಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.

‘ಸುರಂಗ ರಸ್ತೆ ಯೋಜನೆಯ ಹೆಸರು ಕೇಳಿದರೆ ಜನರು ಭೀತಿಗೊಳ್ಳುತ್ತಿದ್ದಾರೆ. ಎಲ್ಲಿ ಯಾರ ಮನೆ ಹೋಗಲಿದೆ ಎಂದು ತಿಳಿಯುತ್ತಿಲ್ಲ. ಲಾಲ್ಬಾಗ್ನಲ್ಲಿ 6 ಎಕರೆ ಜಮೀನು ಕಬಳಿಕೆ ಮಾಡಿ ಯೋಜನೆ ಮಾಡಲಾಗುತ್ತದೆ. ಇದಕ್ಕೆ ಯಾವ ಇಲಾಖೆಯೂ ಅನುಮತಿ ನೀಡಿಲ್ಲ. ಬಿಹಾರ ಚುನಾವಣೆ ಬಂದಿರುವುದರಿಂದ ಹಣ ಮಾಡಲು ಈ ಯೋಜನೆ ಜಾರಿ ಮಾಡುತ್ತಿರಬಹುದು. ‘ಲಾಲ್ಬಾಗ್ ಉಳಿಸಿ, ಬೆಂಗಳೂರು ರಕ್ಷಿಸಿ’ ಎಂಬ ಘೋಷಣೆಯಡಿ ಪ್ರತಿಭಟನೆ ನಡೆಯಲಿದೆ’ ಎಂದರು.

‘ಸಂಸದ ತೇಜಸ್ವಿ ಸೂರ್ಯ ಅವರನ್ನು ಅವಹೇಳನ ಮಾಡುವುದು ತಪ್ಪು. ಇದು ಒಂದು ಲೋಕಸಭಾ ಕ್ಷೇತ್ರಕ್ಕೆ ಮಾಡುವ ಅಪಮಾನ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಗೌರವ ಕೊಟ್ಟು ಮಾತಾಡುವುದನ್ನು ಕಲಿಯಲಿ’ ಎಂದು ಪ್ರತಿಕ್ರಿಯಿಸಿದರು.

ಯಾವಾಗ ಪ್ರಾರಂಭ ಮಾಡುತ್ತಾರೆ: ಎಚ್ಡಿಕೆ

‘ಸುರಂಗ ರಸ್ತೆಯ ಕೆಲಸ ಯಾವಾಗ ಪ್ರಾರಂಭ ಮಾಡುತ್ತಾರೋ ನೋಡೋಣ. ನುರಿತ ತಜ್ಞರು ಅಭಿಪ್ರಾಯ ಪಡೆಯುತ್ತಾರೋ ಇಲ್ಲವೋ ಗೊತ್ತಿಲ್ಲ. ಬೆಂಗಳೂರು ಜನ ಪ್ರತಿನಿತ್ಯ ಅನುಭವಿಸುತ್ತಿರುವ ಸಮಸ್ಯೆ ಬಗೆಹರಿಯಬೇಕು. ಸುರಂಗ ರಸ್ತೆ ಮಾಡುತ್ತಾರೋ, ಎಲಿವೇಟೆಡ್ ರಸ್ತೆ ಮಾಡುತ್ತಾರೋ ಅದು ಸರ್ಕಾರಕ್ಕೆ ಬಿಟ್ಟಿದ್ದು. ಜನರು ಪ್ರತಿನಿತ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರ ಬದುಕಿನಲ್ಲಿ ಚೆಲ್ಲಾಟ ಆಡಬಾರದು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

‘ನಗರದಲ್ಲಿ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ವಿಧಿಸಿರುವ ಗಡುವು ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿರುವುದಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ’ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ. ಮುಖ್ಯಮಂತ್ರಿಯವರ ಮಾತಿಗೆ ಅಧಿಕಾರಿಗಳು ಎಷ್ಟು ಬೆಲೆ ಕೊಡುತ್ತಿದ್ದಾರೆ ಎನ್ನುವುದು ಬಹಿರಂಗವಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.