ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಜಮೀನು ಒತ್ತುವರಿ ತೆರವಿಗೆ 15 ದಿನ ಗಡುವು

ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯಿಂದ ಸೂಚನೆ
Last Updated 21 ಜನವರಿ 2020, 20:00 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು ಮತ್ತು ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ 15 ದಿನಗಳ ಗಡುವು ನೀಡಲಾಗಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ ಪ್ರಸಾದ್‌ ಅವರು ಈ ಬಗ್ಗೆ ಸುತ್ತೋಲೆಯನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆಕಳುಹಿಸಿಕೊಟ್ಟಿದ್ದು, ಒತ್ತುವರಿ ತೆರವುಗೊಳಿಸಲು ವಿಫಲರಾಗಿರುವ ಅಧಿಕಾರಿಗಳು, ನಕಲಿ ದಾಖಲೆಗಳನ್ನು ಸೃಷ್ಟಿಸುವಲ್ಲಿ ಶಾಮೀಲಾದ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.

ನಗರ ಪ್ರದೇಶ, ವಾಣಿಜ್ಯ, ಕೈಗಾರಿಕೆ, ಇತರ ಉದ್ದಿಮೆಗಳಿಗೆ ಅನಧಿಕೃತವಾಗಿ ಸರ್ಕಾರಿ ಜಮೀನು ಬಳಸಿರುವ ಒತ್ತುವರಿ ಪ್ರಕರಣಗಳನ್ನು ಅತಿ ಗಂಭೀರ ಎಂದು ಪರಿಗಣಿಸಿ, ಒತ್ತುವರಿದಾರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸೂಚಿಸಲಾಗಿದೆ. ಕಬಳಿಕೆಯಾಗಿರುವ ಸರ್ಕಾರಿ ಜಮೀನನ್ನು ವಶಕ್ಕೆ ಪಡೆಯಲು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸೂಚಿಸಿತ್ತು. ಹೀಗಾಗಿ ಈ ಸುತ್ತೋಲೆ ಹೊರಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT