ಬೆಂಗಳೂರು: ದೇವನಹಳ್ಳಿ ರೈತರು ಭೂಸ್ವಾಧೀನ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಚಾಮರಾಜನಗರ ಜಿಲ್ಲೆಯ ರೈತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕು ಕುರುಬರಹುಂಡಿಯ ಈಶ್ವರ್ (50) ಮೃತಪಟ್ಟವರು.

ಪ್ರತಿಭಟನೆಯಲ್ಲಿ ಭಾಗಿಯಾಗಲು ಮೈಸೂರಿನಿಂದ ರೈಲು ಮೂಲಕ ಬೆಂಗಳೂರಿಗೆ ಬಂದಿದ್ದರು.
ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ನಡೆದು ತೆರಳುವಾಗ ಅವರು ಕುಸಿದು ಬಿದ್ದಿದ್ದರು. ಅವರ ಜತೆಗೆ ಬಂದಿದ್ದ ರೈತರು, ಈಶ್ವರ್ ಅವರನ್ನು ಶೇಷಾದ್ರಿ ಪುರದ ಅಪೋಲೊ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.

ಈಶ್ವರ್ ಅವರು ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರು. ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಶಂಕೆಯಿದೆ. ವೈದ್ಯರ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.