ಬೆಂಗಳೂರು: ದೇವನಹಳ್ಳಿಯಲ್ಲಿ ಭೂಮಿ ಸ್ವಾಧೀನ ಕೈಬಿಡುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸುತ್ತಿರುವ ರೈತ ಪರ ಹೋರಾಟಗಾರರು, ತಾವು ಬೆಳೆದ ಹಣ್ಣು–ಹಂಪಲು, ಹೂವುಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದರು.

ಭೂಸ್ವಾಧೀನದ ವಿರುದ್ಧ ಹೋರಾಟ ನಡೆಸುತ್ತಿರುವ ರೈತ ಮುಂಖಂಡರೊಂದಿಗೆ ಇಂದು (ಶುಕ್ರವಾರ) ಮಧ್ಯಾಹ್ನ ಮುಖ್ಯಮಂತ್ರಿ ಸಭೆ ನಿಗದಿಯಾಗಿದೆ. ಸಭೆಯಲ್ಲಿ ಭಾಗವಹಿಸುತ್ತಿರುವ ಹೋರಾಟಗಾರರು, ರೈತರು ಮುಖ್ಯಮಂತ್ರಿಗೆ ನೀಡಲು ತಮ್ಮ ಜಮೀನಿನಲ್ಲಿ ಬೆಳೆದಿರುವ ಹೂವು, ಹಣ್ಣು, ತರಕಾರಿಗಳನ್ನು ತಂದಿದ್ದಾರೆ.

ಇದಕ್ಕೂ ಮೊದಲು ಸ್ವಾತಂತ್ರ್ಯ ಉದ್ಯಾನದ ಬಳಿ ಸಮಾವೇಶಗೊಂಡ ರೈತ ಮುಖಂಡರು, ಅಲ್ಲಿಂದ ವಿಧಾನಸೌಧದತ್ತ ಬಂದರು.

ನಿಯೋಗದಲ್ಲಿ ರೈತ ಮುಂಡರಾದ ಬಡಗಲಪುರ ನಾಗೇಂದ್ರ, ಬಸವರಾಜಪ್ಪ, ನಟ ಪ್ರಕಾಶ್ ರಾಜ್, ಸ್ಥಳೀಯ ರೈತ ಮುಖಂಡರು, ರೈತ ಮಹಿಳೆಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.