ಬುಧವಾರ, ಏಪ್ರಿಲ್ 21, 2021
25 °C

ಅಕ್ರಮವಾಗಿ ನಿರ್ಮಿಸಿದ್ದ 8 ಮನೆಗಳ ತೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ತಾಲ್ಲೂಕಿನ ಜಾಲಾ ಹೋಬಳಿ ವ್ಯಾಪ್ತಿಯ ಹೊಸಹಳ್ಳಿಯಲ್ಲಿ ರಾಜಕಾಲುವೆಯ ಮೇಲೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ 8 ಮನೆಗಳನ್ನು ತಾಲ್ಲೂಕು ಆಡಳಿತ ಸೋಮವಾರ ತೆರವುಗೊಳಿಸಿತು.

ಈ ವೇಳೆ ಮನೆ ಮಾಲೀಕರು ವಿರೋಧ ವ್ಯಕ್ತಪಡಿಸಿದರು. ನ್ಯಾಯಾಲಯದ ಆದೇಶದಂತೆ ತೆರವುಗೊಳಿಸಬೇಕಾಗಿದೆ ಎಂದು ಕಂದಾಯ ಅಧಿಕಾರಿಗಳು ಅವರಿಗೆ ಮನವರಿಕೆ ಮಾಡಿಕೊಟ್ಟರು.

ಸರ್ವೆ ನಂ.1,2 ಮತ್ತು 81,82ರ ಮಧ್ಯಭಾಗದ ರಾಜಕಾಲುವೆ ಓಣಿ ವಿವಾದವು 2011-12ರಿಂದಲೂ ನ್ಯಾಯಾಲಯದಲ್ಲಿದ್ದು, ಒತ್ತುವರಿ ತೆರವಿಗೆ ಹೈಕೋರ್ಟ್‌ ಆದೇಶ ನೀಡಿತ್ತು. ಸ್ಥಳೀಯ ನಿವಾಸಿಗಳಿಗೆ ಒಂದು ತಿಂಗಳು ಕಾಲಾವಕಾಶ ನೀಡಿ, ಸ್ವಪ್ರೇರಿತರಾಗಿ ತೆರವುಗೊಳಿಸಲು ಸೂಚಿಸಲಾಗಿತ್ತು. ಇದಕ್ಕೆ ಸ್ಪಂದಿಸದ ಕಾರಣ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಳ್ಳಲು ಈ ಭಾಗದಲ್ಲಿ ಸರ್ಕಾರಿ ಭೂಮಿ ಮೀಸಲಿರಿಸಿ, ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದು’ ತಹಶೀಲ್ದಾರ್‌ ರಘುಮೂರ್ತಿ ಭರವಸೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು