ಬೆಂಗಳೂರು: ‘ಬೆಂಗಳೂರು ಅಡ್ವೊಕೇಟ್ಸ್ ಅಕಾಡೆಮಿಯ ಕಾರ್ಯ ಚಟುವಟಿಕೆಗಳಿಗೆ ಅನುವಾಗುವಂತೆ 10 ಎಕರೆ ಜಮೀನು ನೀಡಬೇಕೆಂಬ ಮನವಿಯನ್ನು ಸರ್ಕಾರಕ್ಕೆ ಮನದಟ್ಟು ಮಾಡಲು ಪ್ರಯತ್ನಿಸಲಾಗುವುದು’ ಎಂದು ಅಡ್ವೊಕೇಟ್ ಜನರಲ್ ವಕೀಲ ವೃಂದಕ್ಕೆ ಭರವಸೆ ನೀಡಿದರು.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯೂ ಆದ ಎ.ಎಸ್.ಓಕಾ ಅವರಿಗೆ ‘ಬೆಂಗಳೂರು ವಕೀಲರ ಸಂಘ’ದ ವತಿಯಿಂದ ಸೋಮವಾರ ನೀಡಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು, ‘ವಕೀಲರ ಅಕಾಡೆಮಿಗೆ ಸರ್ಕಾರವು ಜಮೀನು ಮಂಜೂರು ಮಾಡಬೇಕು ಎಂಬ ಬೇಡಿಕೆಯಿದೆ. ಅಕಾಡೆಮಿಯ ಪದಾಧಿಕಾರಿಗಳು ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಅಕಾಡೆಮಿಗೆ ಜಮೀನಿನ ಅಗತ್ಯತೆ ಕುರಿತು ರಾಜ್ಯ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಲಾಗುವುದು’ ಎಂದರು.

ಅಭಿನಂದನೆ ಸ್ವೀಕರಿಸಿ ಉಪನ್ಯಾಸ ನೀಡಿದ ಎ.ಎಸ್. ಓಕಾ ಅವರು, ‘ಸಾಮಾಜಿಕ ನ್ಯಾಯ ಮತ್ತು ಸಾರ್ವಜನಿಕ ಹಿತಾಸಕ್ತಿ ಹೊಂದಿದ ಪ್ರಕರಣಗಳಲ್ಲಿ ಆಸಕ್ತರಾಗಿ ವೃತ್ತಿ ಕೌಶಲ ಮೈಗೂಡಿಸಿಕೊಳ್ಳಬೇಕು. ಕೋರ್ಟ್ ಹಾಲ್ನಲ್ಲಿ ಕ್ರೋಧಭರಿತರಾಗಿ ಆಕ್ರಮಣಕಾರಿ ಶೈಲಿಯಲ್ಲಿ ವಾದ ಮಂಡಿಸುವುದು ಬಹಳ ಸುಲಭ. ಆದರೆ, ಶಾಂತಚಿತ್ತರಾಗಿ ಸಹನೆಯಿಂದ ವಾದಾಂಶ ಪ್ರತಿಪಾದಿಸುವುದನ್ನು ಅಭ್ಯಾಸ ಮಾಡಿಕೊಂಡಿದ್ದೇ ಆದರೆ, ಅಂತಹವರ ವ್ಯಕ್ತಿತ್ವ ಸಹಜವಾಗಿಯೇ ಎತ್ತರೆತ್ತರ ಬೆಳೆಯುತ್ತದೆ’ ಎಂದು ಕಿವಿಮಾತು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.