ಬೆಂಗಳೂರು: ಕೆ.ಆರ್. ಪುರ ಹೋಬಳಿ ಚಿನ್ನಪ್ಪನಹಳ್ಳಿ ಗ್ರಾಮದ ಸರ್ವೆ ನಂ. 20ರಲ್ಲಿ 19 ಎಕರೆ 19 ಗುಂಟೆ ಸರ್ಕಾರಿ ಖರಾಬು ಭೂಮಿಯನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡ ಬಡಾವಣೆ ನಿರ್ಮಿಸಿರುವ ಘಟನೆಯನ್ನು ಸ್ವಯಂಪ‍್ರೇರಿತವಾಗಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡಿದೆ.
‘ಪ್ರಜಾವಾಣಿ’ಯಲ್ಲಿ ಮಾರ್ಚ್ 20ರಂದು ‘ಸರ್ಕಾರಿ ಜಮೀನು ಒತ್ತುವರಿ: ಕ್ರಮಕ್ಕೆ ಸೂಚನೆ’ ಶೀರ್ಷಿಕೆಯಡಿ ಸುದ್ದಿ ಪ್ರಕಟವಾಗಿತ್ತು. ಇದು ಭೂ ಒತ್ತುವರಿಗೆ ಸಂಬಂಧಿಸಿದ್ದಾಗಿರುವುದರಿಂದ ವಿಶೇಷ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡಿದೆ. ಪೂರ್ವ ತಹಶೀಲ್ದಾರ್ ಅವರಿಗೆ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದೆ ಎಂದು ಸರ್ಕಾರಿ ಅಭಿಯೋಜಕರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.