ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಾ ಬಡಾವಣೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೂಮಿ ಪೂಜೆ

Last Updated 22 ಜೂನ್ 2021, 6:39 IST
ಅಕ್ಷರ ಗಾತ್ರ

ಬೆಂಗಳೂರು: ಚಂದ್ರಾ ಬಡಾವಣೆಯಲ್ಲಿ ₹3 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಕಾಮಗಾರಿಗೆ ವಸತಿ ಸಚಿವ ವಿ.ಸೋಮಣ್ಣ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ‘ಬಡವರು ಹಸಿವಿನಿಂದ ಬಳಲಬಾರದು ಎಂದು ಕ್ಷೇತ್ರದಲ್ಲಿ ಆಹಾರ ಕಿಟ್ ವಿತರಿಸಲಾಗುತ್ತಿದೆ.ಮೂರನೇಯ ಅಲೆ ತಡೆಯಬೇಕಾದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ,ಸಾಮಾಜಿಕ ಅಂತರ ಕಾಯ್ದುಕೊಂಡು, ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ,‘ಅನ್ನದಾನಕ್ಕಿಂತ ಶೇಷ್ಠ ದಾನ ಮತ್ತೊಂದು ಇಲ್ಲ. ಈ ಭಾಗದ ಜನರಿಗೆ ಉಚಿತವಾಗಿ ಆಹಾರ ಸಾಮಗ್ರಿಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ’ ಎಂದರು.

ನಾಗರಬಾವಿ ವಾರ್ಡ್‌‌ನ ಕಚೇರಿಯಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ಬಡವರಿಗೆ ದಿನಸಿ ಕಿಟ್‌ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT