ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿಂದಿ ತೊಲಗಿಸಿ ಕನ್ನಡ ಉಳಿಸಿ’ ಆಂದೋಲನ

ದ್ವಿಭಾಷಾ ಸೂತ್ರ ಅಂಗೀಕಾರಕ್ಕೆ ಒತ್ತಾಯ
Last Updated 10 ಜೂನ್ 2019, 19:39 IST
ಅಕ್ಷರ ಗಾತ್ರ

ಬೆಂಗಳೂರು: ಹಿಂದಿ ಹೇರಿಕೆ ವಿರುದ್ಧ ತ್ರಿಭಾಷಾ ಸೂತ್ರ ತಿರಸ್ಕರಿಸಿ, ದ್ವಿಭಾಷಾ ಸೂತ್ರ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದ್ರಾವಿಡ ಜನಶಕ್ತಿ ಕರ್ನಾಟಕ ಸಂಘಟನೆಯು ಜುಲೈ 1ರಿಂದ ರಾಜ್ಯದಾದ್ಯಂತ ‘ಹಿಂದಿ ತೊಲಗಿಸಿ ಕನ್ನಡ ಉಳಿಸಿ’ ಎಂಬ ಆಂದೋಲನ ಹಮ್ಮಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಹೆಣ್ಣೂರು ಲಕ್ಷ್ಮೀನಾರಾಯಣ, ‘ತ್ರಿಭಾಷಾ ಸೂತ್ರದ ನೆಪದಲ್ಲಿ ಹಿಂದಿಯನ್ನು ದೇಶವ್ಯಾಪಿ ಕಡ್ಡಾಯಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸುತ್ತೇವೆ’ ಎಂದು ಹೇಳಿದರು.

‘ತ್ರಿಭಾಷಾ ಸೂತ್ರವನ್ನು ರದ್ದುಪಡಿಸಿ ದ್ವಿಭಾಷಾ ಸೂತ್ರವನ್ನು ಅಂಗೀಕರಿಸುವ ನಿರ್ಣಯವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲೇ ಅಂಗೀಕರಿಸಬೇಕು’ ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT