ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತನಿಗೆ ಭಾಷೆ, ಭಾಷಾಂತರ ಮುಖ್ಯ: ಡಿ.ಪಿ. ಮುರುಳೀಧರ್

Last Updated 3 ಆಗಸ್ಟ್ 2022, 21:15 IST
ಅಕ್ಷರ ಗಾತ್ರ

ಬೆಂಗಳೂರು: ‘ಪತ್ರಕರ್ತರಿಗೆ ಭಾಷೆ, ಬರವಣಿಗೆ ಮತ್ತು ಭಾಷಾಂತರ ಬಹಳ ಮುಖ್ಯ ಕೌಶಲಗಳು’ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಡಿ.ಪಿ. ಮುರುಳೀಧರ್ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಸರಣಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಡಿಜಿಟಲ್ ಕ್ಷೇತ್ರ ವಿಸ್ತಾರಗೊಂಡಿದ್ದರಿಂದ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳು ಸೃಷ್ಟಿಯಾಗಿವೆ’ ಎಂದು ಹೇಳಿದರು.

‘ಸಾಮಾಜಿಕ ಮಾಧ್ಯಮವು ಡಿಜಿಟಲ್ ಮಾಧ್ಯಮದ ಒಂದು ಅಂಗವೇ ಹೊರತು ಸಾಮಾಜಿಕ ಮಾಧ್ಯಮವೇ ಮಾಧ್ಯಮವಲ್ಲ. ಆದ್ದರಿಂದ, ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಬೇಕಾದ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಮತ್ತು ಹೊಸ ಸವಾಲುಗಳನ್ನು ಎದುರಿಸಲು ಸಜ್ಜಾಗಿರಬೇಕು. ಹೀಗಾಗಿ, ನಿರಂತರ ಅಧ್ಯಯನವೂ ಅತಿ ಮುಖ್ಯ’ ಎಂದು ಸಲಹೆ ನೀಡಿದರು.

ವಿಶ್ವವಿದ್ಯಾಲಯದಲ್ಲಿ ಸುಮಾರು 36 ವರ್ಷಗಳವರೆಗೆ ಮಾಧ್ಯಮ ಸಂಪರ್ಕಗಾರರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಸಿದ್ಧಲಿಂಗಯ್ಯ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT