ಗುರುವಾರ , ಸೆಪ್ಟೆಂಬರ್ 23, 2021
26 °C

ರೇವಾ: ಒಬ್ಬ ವಿದ್ಯಾರ್ಥಿ-ಒಂದು ಮರ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ಸ್ವಚ್ಛ ಮತ್ತು ಹಸಿರು ನಗರವನ್ನು ನಿರ್ಮಿಸುವ ನಿಟ್ಟಿನಲ್ಲಿ ರೇವಾ ವಿಶ್ವವಿದ್ಯಾಲಯವು ಬೆಂಗಳೂರು ಮತ್ತು ಸುತ್ತ ಮುತ್ತಲ ಪ್ರದೇಶಗಳಲ್ಲಿ 15 ಸಾವಿರ ಸಸಿಗಳನ್ನು ನೆಡುವ ಮೂಲಕ ರೇವಾ ವನ ಮಹೋತ್ಸವ ಆಚರಣೆಗೆ ಚಾಲನೆ ನೀಡಲಾಗಿದೆ ಎಂದು ಕುಲಾಧಿಪತಿ ಡಾ.ಪಿ.ಶ್ಯಾಮರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ’ಆಜಾದಿ ಕಾ ಅಮೃತ್ ಮಹೋತ್ಸವ್’ ಸಂಭ್ರಮಾಚರಣೆಯ ಧ್ಯೇಯದೊಂದಿಗೆ ರೇವಾ ವನಮಹೋತ್ಸವದಡಿಯಲ್ಲಿ ಒಬ್ಬ ವಿದ್ಯಾರ್ಥಿ-ಒಂದು ಮರ ಅಭಿಯಾನದ ಮೂಲಕ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಪ್ರಕೃತಿಯ ಬಗ್ಗೆ ಜವಾಬ್ದಾರಿ ಹಾಗೂ ಪ್ರಜ್ಞೆಯನ್ನು ಮೂಡಿಸುವ ಗುರಿ ಹೊಂದಿದೆ. 2021-22ನೇ ಶೈಕ್ಷಣಿಕ ವರ್ಷದಿಂದ ರೇವಾ ದಲ್ಲಿ ಪ್ರವೇಶ ಪಡೆಯುವ ಪ್ರತಿ ವಿದ್ಯಾರ್ಥಿಯು ಒಂದೊಂದು ಸಸಿ ನೆಡಲಿದ್ದಾರೆ‘ ಎಂದರು.

’ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು 2022ರ ವೇಳೆಗೆ 15 ಸಾವಿರ ಸಸಿಗಳನ್ನು ನೆಡಲಿದ್ದಾರೆ. ಇದರ ಭಾಗವಾಗಿ ಮೊದಲ ಹಂತದಲ್ಲಿ ರೇವಾ ವಸತಿನಿಲಯದ ವಿದ್ಯಾರ್ಥಿಗಳು ಮತ್ತು ಬೋಧಕ ವೃಂದದವರಿಂದ ಸುಮಾರು 3 ಸಾವಿರ ಗಿಡಗಳನ್ನು ನೆಡಲಾಗುವುದು. ಅಲ್ಲದೆ ಬಿಬಿಎಂಪಿ ಸಹಯೋಗದೊಂದಿಗೆ ನೆಡುತೋಪು ಅಭಿಯಾನ ನಡೆಸುವುದರ ಜೊತೆಗೆ ಹಸಿರಿನ ಕೊರತೆಯಿರುವ ಅರಣ್ಯ ಪ್ರದೇಶಗಳಲ್ಲಿ ಸಸಿಗಳನ್ನು ನೆಡಲು ತೀರ್ಮಾನಿಸಲಾಗಿದೆ‘ ಎಂದು ಹೇಳಿದರು.

ಶ್ರೀನಿವಾಸಪುರ, ಕೋಗಿಲು ಕೆರೆ, ಪಾಲನಹಳ್ಳಿ ಕೆರೆ ಮತ್ತು ರೇವಾ ವಿಶ್ವವಿದ್ಯಾಲಯದ ಸುತ್ತಮುತ್ತಲ ಕೆಲವು ಗ್ರಾಮಪಂಚಾಯಿತಿ ಪ್ರದೇಶಗಳನ್ನು ಗುರುತಿಸಿ ಸಸಿನೆಡುವ ಕಾರ್ಯಕ್ರಮ ಆರಂಭಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ 6 ಸಾವಿರ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದ್ದು, ಈ ಸಂದರ್ಭದಲ್ಲಿ ಸಿಎಸ್ಆರ್ ಕಾರ್ಯಕ್ರಮದಡಿಯಲ್ಲಿ ವಿಶ್ವವಿದ್ಯಾಲಯವು ದತ್ತು ಪಡೆದಿರುವ 10 ಸರ್ಕಾರಿ ಶಾಲೆ ಗಳಲ್ಲಿಯೂ ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಸ್ವಯಂಸೇವಕರು ಮತ್ತು ಸರ್ಕಾರಿ ಶಾಲೆಗಳ ಸಿಬ್ಬಂದಿ ಸಸಿಗಳ ನಿರ್ವ
ಹಣೆ ಮಾಡುವ ಆಸಕ್ತಿ ತೋರಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಶಸ್ತಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನೇತೃತ್ವದ ಇಕೋ ಕ್ಲಬ್‌ಗಳು ನುರಿತ ಮಾರ್ಗದರ್ಶಕರ ಸಹಾಯದಿಂದ ಪ್ರಚಾರ ಮತ್ತು ಮೇಲ್ವಿಚಾರಣೆ ಮಾಡಲಿವೆ. 2022ರ ಆಗಸ್ಟ್ 15 ರಂದು ಅತ್ಯುತ್ತಮವಾಗಿ ಬೆಳೆದ ಮರ ಮತ್ತು ನಿರ್ವಹಣೆಯನ್ನು ಪರಿಗಣಿಸಿ, ಮಾರ್ಗದರ್ಶಕರ ಶಿಫಾರಸಿನ ಮೇರೆಗೆ ಪ್ರಶಸ್ತಿ ನೀಡಲಾಗುವುದು ಎಂದು ಶ್ಯಾಮರಾಜು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು