ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಮೆಟ್ರೊ ಹಳಿಗೆ ಬಿದ್ದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ

Published : 21 ಮಾರ್ಚ್ 2024, 11:19 IST
Last Updated : 21 ಮಾರ್ಚ್ 2024, 11:19 IST
ಫಾಲೋ ಮಾಡಿ
Comments

ಬೆಂಗಳೂರು: ಅತ್ತಿಗುಪ್ಪೆ ನಿಲ್ದಾಣದಲ್ಲಿ ಮೆಟ್ರೊ ರೈಲು ಚಲಿಸುತ್ತಿದ್ದ ಸಂದರ್ಭದಲ್ಲಿ ಹಳಿಗೆ ಬಿದ್ದು ಧ್ರುವ್ ಠಕ್ಕರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಹಾರಾಷ್ಟ್ರದ ಧ್ರುವ್, ಸರ್ಕಾರಿ ಕಾಲೇಜಿನಲ್ಲಿ ಎಲ್‌ಎಲ್‌ಬಿ ಮೊದಲ ವರ್ಷದಲ್ಲಿ ಓದುತ್ತಿದ್ದರು. ಗುರುವಾರ ನಿಲ್ದಾಣಕ್ಕೆ ಬಂದಿದ್ದ ಇವರು, ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದರು. ರೈಲು ಬರುತ್ತಿದ್ದಂತೆ ಅದರ ಎದುರು ಹಳಿ ಮೇಲೆ ಜಿಗಿದಿದ್ದರು’ ಎಂದು ಮೂಲಗಳು ಹೇಳಿವೆ.

‘ಘಟನೆಯಿಂದಾಗಿ ದೇಹದ ಭಾಗಗಳೆಲ್ಲವೂ ಛಿದ್ರವಾಗಿದ್ದವು. ಪೊಲೀಸರು ಹಾಗೂ ಮೆಟ್ರೊ ಸಿಬ್ಬಂದಿ, ಹಳಿ ಮೇಲಿದ್ದ ಮೃತದೇಹದ ಭಾಗಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಇದೊಂದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ಬಿಎಂಆರ್‌ಸಿಎಲ್ ಅಧಿಕಾರಿಗಳು, ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT