ಬುಧವಾರ, ಮಾರ್ಚ್ 29, 2023
25 °C

ಕಾನೂನು ತನ್ನ ಕೆಲಸ ಮಾಡಲಿದೆ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಶಾಸಕ ರಮೇಶ ಜಾರಕಿಹೊಳಿ ನನ್ನ ಜತೆಗೆ ಎರಡು ದಿನಗಳಿಂದ ಇದ್ದದ್ದು ನಿಜ. ಆದರೆ ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಅವರ ಜತೆಗೆ ಮಾತುಕತೆ ಆಗಿಲ್ಲ. ಸಿ.ಡಿ ಪ್ರಕರಣದಲ್ಲಿ ಕಾನೂನು ತನ್ನ ಕೆಲಸ ಮಾಡಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ವಿರುದ್ಧ ಹಲವಾರು ಆರೋಪಗಳನ್ನು ಮಾಡಿ ಸಿ.ಡಿ ಪ್ರಕರಣ
ವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಒತ್ತಾಯಿಸಿರುವ ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ರಮೇಶ ಅವರು ಬಂದಾಗ ಅವರ ಜೊತೆಗೆ ಮಾತನಾಡುತ್ತೇನೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು