ಬೆಂಗಳೂರು: ನಗರದ ಜ್ಞಾನಭಾರತಿ ಬಳಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಕೀಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೆ.ಪಿ.ನಗರ ನಿವಾಸಿ ಹೇಮಂತ್ ಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು.

ಬೆಂಗಳೂರಿನಿಂದ ಮೈಸೂರಿಗೆ ಗುರುವಾರ ಬೆಳಿಗ್ಗೆ 6.30ರ ಸುಮಾರಿಗೆ ತೆರಳುತ್ತಿದ್ದ ಹಂಪಿ ಎಕ್ಸ್ಪ್ರೆಸ್ಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ಹೇಮಂತ್ ಅವರು ಈ ಹಿಂದೆ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಬಳಿಕ ಕೆಲಸ ತೊರೆದು ವಕೀಲ ವೃತ್ತಿ ಮಾಡುತ್ತಿದ್ದರು. ಅವರ ಪತ್ನಿ ನೇಹಾ ಸಹ ವಕೀಲರಾಗಿ ಕೆಲಸ ಮಾಡುತ್ತಿದ್ದಾರೆ. ಅ.21ರಂದು ಹೇಮಂತ್ ಅವರು ಮನೆ ತೊರೆದು ಹೋಗಿದ್ದರು. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ ನಡುವೆ ಗುರುವಾರ ಬೆಳಿಗ್ಗೆ ರೈಲ್ವೆ ಹಳಿಯ ಮೇಲೆ ಹೇಮಂತ್ ಅವರ ಮೃತದೇಹ ಪತ್ತೆಯಾಗಿದೆ.

ಮೆಜೆಸ್ಟಿಕ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.