ಸೋಮವಾರ, ಅಕ್ಟೋಬರ್ 26, 2020
21 °C

ನಾಯಕತ್ವ ಬದಲಾವಣೆ ದೂರದ ಮಾತು: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು:‘ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾರೋ ಕೆಲವರು ಬದಲಾವಣೆ ಮಾಡಬೇಕು ಎನ್ನುತ್ತಾರೆ. ಮುಂದಿನ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂಬ ಭರವಸೆಯನ್ನು ವರಿಷ್ಠರಿಗೆ ನೀಡಿದ್ದೇನೆ ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ನವದೆಹಲಿಯಲ್ಲಿ ರಾತ್ರಿ ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆ ದೂರದ ಮಾತು ಎಂದಿದ್ದಾರೆ.

ಯಡಿಯೂರಪ್ಪ ದೆಹಲಿಗೆ ತೆರಳಿದ ಬೆನ್ನಲ್ಲೇ ನಾಯಕತ್ವ ಬದಲಾವಣೆ ವದಂತಿ ಮುನ್ನೆಲೆಗೆ ಬಂದಿತ್ತು. ಮುಖ್ಯಮಂತ್ರಿಯಾಗಿ ಒಂದು ವರ್ಷ ಆಗಿರುವುದರಿಂದ ಮತ್ತು ವಯಸ್ಸಿನ ಕಾರಣದಿಂದ ಮುಖ್ಯಮಂತ್ರಿ ಸ್ಥಾನ ಬಿಡಲು ವರಿಷ್ಠರು ಸೂಚಿಸಲಿದ್ದಾರೆ ಎಂದು ಚರ್ಚೆ ರಾಜಕೀಯ ವಲಯದಲ್ಲಿ ನಡೆದಿತ್ತು.

ಆದರೆ ರಾತ್ರಿ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಯಡಿಯೂರಪ್ಪ, ಅವಧಿಪೂರ್ಣಗೊಳ್ಳುವವರೆಗೆ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವ ಸೂಚನೆ ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು