ಶನಿವಾರ, ಜನವರಿ 25, 2020
29 °C

95 ಉಪನ್ಯಾಸಕರಿಗೆ ಪ್ರಾಂಶುಪಾಲ ಹುದ್ದೆಗೆ ಬಡ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರಾಂಶುಪಾಲ ಹುದ್ದೆಗೆ ಬಡ್ತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.

ಒಟ್ಟು 95 ಉಪನ್ಯಾಸಕರಿಗೆ ಪ್ರಾಂಶುಪಾಲರ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ ನೀಡಲಾಗಿದ್ದು, ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯುಕ್ತಿ ಮಾಡಲು ಸೂಚಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.

ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ 7 ದಿನಗಳಲ್ಲಿ ಕರ್ತವ್ಯದಿಂದ ಬಿಡುಗಡೆಯಾಗಿ ಆಯ್ಕೆ ಮಾಡಿಕೊಂಡ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದೂ ತಿಳಿಸಿದ್ದಾರೆ. ಆಯ್ಕೆಯಾದವರ ಪಟ್ಟಿಯನ್ನು ಇಲಾಖೆ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು