ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಕಣ್ಣು ಕುಕ್ಕುವ ಎಲ್‌ಇಡಿ ದೀಪ ಅಳವಡಿಕೆ: 239 ಪ್ರಕರಣ ದಾಖಲು

Published 2 ಜುಲೈ 2024, 16:34 IST
Last Updated 2 ಜುಲೈ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ಕಣ್ಣುಕುಕ್ಕುವ ಎಲ್‌ಇಡಿ ದೀಪ ಅಳವಡಿಸಿಕೊಂಡ ವಾಹನಗಳ ವಿರುದ್ಧ ಪಶ್ಚಿಮ ಸಂಚಾರ ವಿಭಾಗದ ಪೊಲೀಸರು ಕೇಂದ್ರ ಮೋಟರು ವಾಹನ ಕಾಯ್ದೆ ಪ್ರಕಾರ 239 ಪ್ರಕರಣ ದಾಖಲಿಸಿಕೊಂಡಿದ್ದಾರೆ’ ಎಂದು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣವರ್ ಹೇಳಿದರು.

‘ನಗರದಲ್ಲಿ ಇತ್ತೀಚೆಗೆ ಕಣ್ಣುಕುಕ್ಕುವ ಎಲ್‌ಇಡಿ ದೀಪ ಅಳವಡಿಸಿಕೊಂಡಿರುವ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ, ರಸ್ತೆ ಅಪಘಾತಗಳ ಪ್ರಕರಣ ಸಂಖ್ಯೆಯೂ ಹೆಚ್ಚುತ್ತಿದೆ. ಜುಲೈ 1ರಂದು ಪಶ್ಚಿಮ ಸಂಚಾರ ವಿಭಾಗದ ಎಲ್ಲ ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ವಾಹನ ಸವಾರರಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಸಹ ಮೂಡಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT