ಬೆಂಗಳೂರು: ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಜುಲೈ 9ರ ಮುಷ್ಕರಕ್ಕೆ ಎಡ ಪಕ್ಷಗಳು ಬೆಂಬಲ ಘೋಷಿಸಿವೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಪಿಐ ರಾಜ್ಯ ಮಂಡಳಿ ಕಾರ್ಯದರ್ಶಿ ಸಾತಿ ಸುಂದರೇಶ್, ‘ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಹತ್ತಿಕ್ಕುವ ನಾಲ್ಕು ಕಾಯ್ದೆಗಳ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಇದು ಖಂಡನೀಯ. ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಮುಷ್ಕರದಲ್ಲಿ ಭಾಗಿಯಾಗುತ್ತೇವೆ’ ಎಂದು ತಿಳಿಸಿದರು.

‘ಕೆಲಸದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸುವುದು, ಗುತ್ತಿಗೆ ಪದ್ಧತಿಯನ್ನು ವ್ಯಾಪಕಗೊಳಿಸುವುದು, ಮಹಿಳೆಯರನ್ನು ರಾತ್ರಿ ಪಾಳಿಗಳಲ್ಲಿ ಕೆಲಸಕ್ಕೆ ತೊಡಗಿಸುವುದು ಸೇರಿ ವಿವಿಧ ಕಾರ್ಮಿಕ ನೀತಿಗಳನ್ನು ವಾಪಸ್ ಪಡೆಯಬೇಕು. ರಾಜ್ಯದ ಕಾಂಗ್ರೆಸ್ ಸರ್ಕಾರವೂ ಕೇಂದ್ರದ ಬಿಜೆಪಿ ಸರ್ಕಾರದ ದಾರಿಯಲ್ಲೇ ಸಾಗುತ್ತಿದೆ. ಕಾರ್ಮಿಕ ಕಾನೂನುಗಳನ್ನು ಬಂಡವಾಳದಾರರ ಹಿತಾಸಕ್ತಿಯಂತೆ ಬದಲಾವಣೆ ಮಾಡುತ್ತಿದೆ’ ಎಂದು ದೂರಿದರು.

ಸಿಪಿಎಂ ರಾಜ್ಯ ಮಂಡಳಿ ಕಾರ್ಯದರ್ಶಿ ಪ್ರಕಾಶ್ ಕೆ., ಸಿಪಿಐ (ಮಾರ್ಕ್ಸಿಸ್ಟ್–ಲೆನಿನಿಸ್ಟ್) ರಾಜ್ಯ ಘಟಕದ ಕಾರ್ಯದರ್ಶಿ ಕ್ಲಿಫ್ಟನ್ ರೊಜಾರಿಯೋ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ರಾಜ್ಯ ಘಟಕದ ಕಾರ್ಯದರ್ಶಿ ಉಮಾ ಕೆ. ಹಾಗೂ ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ನ ರಾಜ್ಯ ಘಟಕದ ಕಾರ್ಯದರ್ಶಿ ಜಿ.ಆರ್.ಶಿವಶಂಕರ್ ಅವರು ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.