ಕೆಂಗೇರಿ: ‘ಚಿರತೆಗಳ ಸಾವಿಗೆ ಕಾರಣರಾದ ತಪ್ಪಿತಸ್ಥರನ್ನು ಕೂಡಲೇ ಬಂಧಿಸದಿದ್ದರೆ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಎಚ್ಚರಿಕೆ ನೀಡಿದರು.

‘ಯಶವಂತಪುರ ಕ್ಷೇತ್ರದ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಲಿವಾರ ಸಮೀಪದ ಎಸ್.ಗೊಲ್ಲಹಳ್ಳಿಯಲ್ಲಿ ಬಂಡೆ ಸ್ಫೋಟದಿಂದ ನಾಲ್ಕು ಚಿರತೆಗಳು ಸಾವಿಗೀಡಾಗಿವೆ. ಸ್ಫೋಟಿಸಿದ ಪ್ರಭಾವಿಗಳು ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ಮಾಹಿತಿ ಇದೆ. ಈ ಸಂಬಂಧ ಅರಣ್ಯಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಿಗೂ ಚಿರತೆಗಳ ಸಾವಿನ ಕುರಿತು ಮಾಹಿತಿ ನೀಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚಿಗೆ ಕಾನೂನುಬಾಹಿರ ಕಲ್ಲು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ಗಣಿಬಾಧಿತ ವ್ಯಾಪ್ತಿಯ ಮನೆಗಳು ಬಿರುಕು ಬಿಟ್ಟು ಹಾನಿಗೆ ಒಳಗಾಗುತ್ತಿವೆ. ದೂಳಿನಿಂದ ಗ್ರಾಮಸ್ಥರ ಆರೋಗ್ಯ ಹದಗೆಡುತ್ತಿದೆ. ಶಬ್ದ ಹಾಗೂ ಮಾಲಿನ್ಯದಿಂದ ಪರಿಸರ ನಾಶವಾಗುತ್ತಿದ್ದು, ಕೂಡಲೇ ಸರ್ಕಾರ ಕಾನೂನುಬಾಹಿರ ಕಲ್ಲು ಗಣಿಗಾರಿಕೆಯನ್ನು ಬಂದ್ ಮಾಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.