ಗುರುವಾರ , ಮೇ 26, 2022
23 °C

ದೀಪಾವಳಿಗೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಮಹದೇವಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮರವೇರಿ ಕುಳಿತಿದ್ದ ಚಿರತೆ-ಸಂಗ್ರಹ ಚಿತ್ರ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ‘ಚಿರತೆ ಸಫಾರಿ’ ಆರಂಭವಾಗಲಿದೆ ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ತಿಳಿಸಿದರು.

ಗುರುವಾರ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ‘₹ 2 ಕೋಟಿ ಅನುದಾನದಲ್ಲಿ 50 ಎಕರೆ ಪ್ರದೇಶದಲ್ಲಿ ಸಫಾರಿ ಆರಂಭಿಸುವ ಕಾರ್ಯ ಅಂತಿಮ ಹಂತದಲ್ಲಿದೆ’ ಎಂದರು.

‌‘ಆರಂಭಿಕ ಹಂತದಲ್ಲಿ 8 ಚಿರತೆ ಬಿಟ್ಟು, ಪ್ರಾಯೋಗಿಕ ಸಫಾರಿ ನಡೆಸಲಾಗುವುದು. ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗಾಗಿ ₹ 80 ಲಕ್ಷ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಯನ್ನು ಕೋರಲಾಗಿದ್ದು, ಸಚಿವ ಆನಂದ್‌ ಸಿಂಗ್‌ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಹೇಳಿದರು.

‘ಪ್ರಾಣಿಗಳ ಆರೋಗ್ಯ ರಕ್ಷಣೆಗೆ ಉದ್ಯಾನದಲ್ಲಿ ಸುಸಜ್ಜಿತ ಆಸ್ಪತ್ರೆಗೆ ಮನವಿ ಮಾಡಲಾಗಿದೆ. ಸುಮಾರು ₹ 7 ಕೋಟಿ  ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಪಶುಸಂಗೋಪನೆ ಹಾಗೂ ಅರಣ್ಯ ಸಚಿವರ ಜೊತೆಯೂ ಚರ್ಚಿಸಲಾಗಿದೆ’ ಎಂದರು.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ, ಕಾರ್ಯನಿರ್ವಾಹಕ ಎಂಜಿನಿಯರ್‌ ನಾಗೇಂದ್ರಪ್ಪ, ಉಪನಿರ್ದೇಶಕ ಹರೀಶ್, ಆನೆಗಳ ಮೇಲ್ವಿಚಾರಕ ಸುರೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು