ಮಂಗಳವಾರ, ಮಾರ್ಚ್ 21, 2023
20 °C

ಬೆಂಗಳೂರು ವಿವಿ ಆವರಣದಲ್ಲಿ ಚಿರತೆ ಪ್ರತ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬುಧವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಹಾಸ್ಟೆಲ್‌ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ರಾತ್ರಿ 11.30ರ ಸುಮಾರಿಗೆ ಹಾಸ್ಟೆಲ್ ಬಳಿ ಚಿರತೆ ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳು ತಕ್ಷಣ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಗೂ ಸಂದೇಶ ರವಾನಿಸಿದ್ದಾರೆ. ಸ್ವಲ್ಪ ಸಮಯ ಅಲ್ಲೇ ಅಲೆದಾಡಿದ ಚಿರತೆ ನಂತರ ಮರೆಯಾಗಿದೆ.

‘ವಿಶ್ವವಿದ್ಯಾಲಯದ ಆವರಣದ ಹಾಸ್ಟೆಲ್‌ ಬಳಿ ಚಿರತೆ ಕಾಣಿಸಿಕೊಂಡಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೇವೆ. ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಜಾಗರೂಕರಾಗಿರಬೇಕು. ರಾತ್ರಿ ಸಮಯದಲ್ಲಿ ಅನಗತ್ಯ ತಿರುಗಾಟ ನಡೆಸಬಾರದು. ಮತ್ತೆ ಕಾಣಿಸಿದರೆ ತಕ್ಷಣ ಮಾಹಿತಿ ನೀಡಬೇಕು’ ಎಂದು ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು