ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ನಾಯಕರು ಮೊದಲು ನಿಯಮ ಓದಲಿ: ಸಚಿವ ರಾಮಲಿಂಗಾರೆಡ್ಡಿ

Published 22 ಫೆಬ್ರುವರಿ 2024, 15:55 IST
Last Updated 22 ಫೆಬ್ರುವರಿ 2024, 15:55 IST
ಅಕ್ಷರ ಗಾತ್ರ

ಬೆಂಗಳೂರು: ಮುಜರಾಯಿ ದೇವಸ್ಥಾನಗಳ ಆದಾಯವನ್ನು ಬೇರೆ ಧರ್ಮಗಳ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ ಎಂದು ಆರೋಪಿಸುವ ಬಿಜೆಪಿ ನಾಯಕರು ಮೊದಲು ನಿಯಮಗಳನ್ನು ಓದಿ ತಿಳಿದುಕೊಳ್ಳಲಿ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಅಧಿಕ ಆದಾಯ ಇರುವ ದೇವಸ್ಥಾನಗಳಿಂದ ಸಂಗ್ರಹಿಸಲು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಗೆ 2011ರಲ್ಲಿ ತಿದ್ದುಪಡಿ ಮಾಡಲಾಗಿತ್ತು. ಈ ನಿಧಿಯನ್ನು ಯಾವುದಕ್ಕೆ ಬಳಸಬೇಕು ಎಂಬುದರ ಬಗ್ಗೆ ಸ್ಪಷ್ಟ ನಿಯಮಗಳಿವೆ ಎಂದು ಅವರು ಹೇಳಿದ್ದಾರೆ.

ಆದಾಯ ಕಡಿಮೆ ಇರುವ ಹಿಂದೂ ಧಾರ್ಮಿಕ ಸಂಸ್ಥೆಗಳಿಗೆ ಸಹಾಯಧನ ನೀಡಲು, ವೇದಪಾಠ ಶಾಲೆ, ಆಗಮ ಪಾಠಶಾಲೆಗಳಿಗೆ, ಅರ್ಚಕರಿಗೆ ತರಬೇತಿ ನೀಡಲು ಬಳಸಬಹುದು. ಹಿಂದೂ ಧರ್ಮ ತತ್ವಶಾಸ್ತ್ರ ಅಥವಾ ಶಾಸ್ತ್ರಗಳ ಅಧ್ಯಯನಕ್ಕೆ, ದೇವಸ್ಥಾನಗಳ ವಾಸ್ತುಶಿಲ್ಪ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳ ನಿರ್ವಹಣೆಗೆ ಹೀಗೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ಉದ್ದೇಶಗಳಿಗೆ ಸಂಬಂಧಿಸಿದಂತೆ ಮಾತ್ರ ಬಳಸಬೇಕು ಎಂದೂ ನಿಯಮ ಇದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT