ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಪ್ರಶ್ನೆಗೆ ಬೊಮ್ಮಾಯಿ ಉತ್ತರಿಸಲಿ – ಸುರ್ಜೇವಾಲಾ

Last Updated 17 ಫೆಬ್ರುವರಿ 2023, 5:26 IST
ಅಕ್ಷರ ಗಾತ್ರ

ಬೆಂಗಳೂರು: ‘ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಕಳೆದ ಬಜೆಟ್‌ನಲ್ಲಿ ನೀಡಿದ ಭರವಸೆಗಳನ್ನೇ ಈಡೇರಿಸಿಲ್ಲ. ಈಗ ಹೊಸ ಬಜೆಟ್ ಮಂಡಿಸಲು ಹೊರಟಿದ್ದಾರೆ’ ಎಂದು ಟೀಕಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ‘ಹೊಸದಾಗಿ ಬಜೆಟ್ ಮಂಡಿಸುತ್ತಿರುವ ಬೊಮ್ಮಾಯಿ ನಮ್ಮ ಪ್ರಶ್ನೆಗಳಿಗೆ ಉತ್ತರಿಸಬೇಕು’ ಎಂದು ಸವಾಲು ಹಾಕಿದರು.

ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಪಕ್ಷದ ಮುಖಂಡ ಕೆ.ಎಚ್. ಮುನಿಯಪ್ಪ, ಶಾಸಕ ಪ್ರಿಯಾಂಕ್ ಖರ್ಗೆ ಜೊತೆ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘‌ಕಲ್ಯಾಣ ಕರ್ನಾಟಕ ಭಾಗಕ್ಕೆ ಘೋಷಿಸಿದ್ದ ಹಣ ಯಾಕೆ ಬಳಸಿಕೊಂಡಿಲ್ಲ. ಒಕ್ಕಲಿಗ ಅಭಿವೃದ್ಧಿ ಹಾಗೂ ಬಿಲ್ಲವ ಕೋಶಕ್ಕೆ ಘೋಷಿಸಿದ್ದ ಅನುದಾನ ಬಿಡುಗಡೆ ಯಾಕೆ ಮಾಡಿಲ್ಲ? ಪಂಚಮಸಾಲಿ ಲಿಂಗಾಯತರಿಗೆ ನೀಡಿದ ಭರವಸೆ ಇನ್ನೂ ಈಡೇರಿಲ್ಲ ಯಾಕೆ? ಗೋವಾದಲ್ಲಿ ಕನ್ನಡ ಭವನ ಯಾಕೆ ನಿರ್ಮಾಣ ಆಗಿಲ್ಲ’ ಎಂದು ಪ್ರಶ್ನಿಸಿದರು.

‘2018ರಲ್ಲಿ ಕೊಟ್ಟ ಅನೇಕ ಭರವಸೆಗಳನ್ನು ಬಿಜೆಪಿ ಈಡೇರಿಸಲಿಲ್ಲ. ಶಿಕ್ಷಣಕ್ಕೆ ₹ 3 ಸಾವಿರ ಕೋಟಿ ನೀಡಿದರೂ ವೆಚ್ಚ ಮಾಡಿಲ್ಲ. ₹ 4,500 ಕೋಟಿ ಮೊತ್ತದ ಎಸ್‌ಸಿ, ಎಸ್‌ಟಿ, ಹಿಂದುಳಿದ ಸಮುದಾಯದ ಪ್ರತಿಭಾ ಪುರಸ್ಕಾರ ಈಡೇರಿಸಿಲ್ಲ’ ಎಂದರು.

ಎಂ.ಬಿ. ಪಾಟೀಲ ಮಾತನಾಡಿ, ‘ಬಸವರಾಜ ಸುಳ್ಳಿನ ಸರದಾರ. ಅವರು ನೀಡಿದ ಭರವಸೆ ಈಡೇರಿಸದಿದ್ದರೆ, ಬೆನ್ನಿಗೆ ಚೂರಿ ಹಾಕಿದಂತೆ ಆಗಲಿದೆ. ಸರ್ಕಾರ ಜನ ವಿರೋಧಿಯಾಗಿದೆ’ ಎಂದರು.

ಕೆ.ಎಚ್‌. ಮುನಿಯಪ್ಪ ಮಾತನಾಡಿ, ‘ಬಿಜೆಪಿ ಸರ್ಕಾರ ಬಂದ ಬಳಿಕ ಕಾರ್ಮಿಕರು ಬೀದಿಪಾಲಾಗಿದ್ದಾರೆ. ಕೋಮು ಗಲಭೆಯಲ್ಲಿ ಅಲ್ಪಸಂಖ್ಯಾತರು ನೆಮ್ಮದಿ ಕಳೆದುಕೊಂಡಿದ್ದಾರೆ. ಒಟ್ಟಾರೆ ರಾಜ್ಯದ ನೆಮ್ಮದಿ ಹಾಳಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಗೊಂದಲಮಯವಾಗಿದೆ’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT