ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗರಿಕರ ಸಮಸ್ಯೆಗೆ ಸಕಾಲದಲ್ಲಿ ಪರಿಹಾರ ಸಿಗಲಿ: ಶಾಲಿನಿ ರಜನೀಶ್‌

Published : 26 ಆಗಸ್ಟ್ 2024, 23:54 IST
Last Updated : 26 ಆಗಸ್ಟ್ 2024, 23:54 IST
ಫಾಲೋ ಮಾಡಿ
Comments

ಬೆಂಗಳೂರು: ‘ಸಹಾಯ ಹೆಸರಿನಲ್ಲಿ ಆ್ಯಪ್‌ ಮಾಡಿದರೆ ಸಾಲದು. ಸಕಾಲದಲ್ಲಿ ಜನರಿಗೆ ಪರಿಹಾರ ಸಿಗಬೇಕು. ಇದಕ್ಕಾಗಿ, ಬಿಬಿಎಂಪಿ ಆಡಳಿತಕ್ಕೆ ಚುರುಕು ನೀಡಬೇಕಾಗಿದೆ’ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅಭಿಪ್ರಾಯಪಟ್ಟರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ‘ಇಂಟಿಗ್ರೇಟೆಡ್‌ ಕಮಾಂಡ್‌ ಕಂಟ್ರೋಲ್‌ ಸೆಂಟರ್‌’ಗೆ (ಐಸಿಸಿಸಿ) ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು.

‘ಉಪ ಮುಖ್ಯಮಂತ್ರಿಯವರು ನಾಗರಿಕರ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅದರಂತೆ ಪರಿಶೀಲನೆ ನಡೆಸಿ, ಆಡಳಿತದಲ್ಲಿ ಸುಧಾರಣೆ ತರಲು ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿ ನಾಗರಿಕರ ಸಮಸ್ಯೆಗೆ ಸಕಾಲದಲ್ಲಿ ಪರಿಹಾರ ಕಲ್ಪಿಸಲು ಎಲ್ಲ ಇಲಾಖೆಗಳು ಸಮನ್ವಯ ಸಾಧಿಸಬೇಕು. ಪರಿಹಾರ ಕೈಗೊಂಡಿರುವುದರನ್ನು ಜನರಿಗೆ ತಿಳಿಸಬೇಕು’ ಎಂದು ಹೇಳಿದರು.

ನಗರದಲ್ಲಿ ಹೆಚ್ಚು ಮಳೆ ಬಂದರೆ, ಪ್ರವಾಹ ಉಂಟಾಗುತ್ತಿದೆ. ಮರಗಳು ಬಿದ್ದರೆ ಪ್ರಾಣ ಹಾನಿಯೂ ಆಗುತ್ತಿದೆ. ಇದನ್ನು ಪರಿಹರಿಸಲು ತಾಂತ್ರಿಕವಾಗಿ ಹೇಗೆ ಕ್ರಮ ಕೈಗೊಳ್ಳಬಹುದು ಎಂಬುದನ್ನು ಪ್ರತ್ಯೇಕ ತಂತ್ರಾಂಶ ರೂಪಿಸಬೇಕು ಎಂದು ಸೂಚಿಸಿದರು.

ಮ್ಯಾನ್‌ಹೋಲ್‌ ಸಮಸ್ಯೆ, ಬೃಹತ್‌ ನೀರುಗಾಲುವೆಯಲ್ಲಿ ನೀರು ಹರಿವು ಹೆಚ್ಚಳ, ತಾಜ್ಯ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳನ್ನು ನಾಗರಿಕರು ಎದುರಿಸುತ್ತಿದ್ದಾರೆ. ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಎಲ್ಲ ಇಲಾಖೆಗಳ ಮಧ್ಯೆ ಸಮನ್ವಯ ಸಾಧಿಸಬೇಕು. ಸಿಬ್ಬಂದಿ ಕೊರತೆಯನ್ನು ನೆಪವಾಗಿಟ್ಟುಕೊಳ್ಳದೆ, ಆಡಳಿತಾತ್ಮಕವಾಗಿ, ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂಬ ಸೂಚನೆ ನೀಡಲಾಗಿದೆ ಎಂದರು.

ಹಲವು ವರ್ಷಗಳಿಂದ ನಿಂತು ಹೋಗಿದ್ದ ಮುಖ್ಯ ಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಮಾಸಿಕ ಸಭೆಯನ್ನೂ ಶಾಲಿನಿ ರಜನೀಶ್‌ ಅವರು ನಡೆಸಿದ್ದಾರೆ. 

ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ.‌ ಕೆ ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಬಿಎಂಆರ್‌ಡಿಎ ಆಯುಕ್ತ ರಾಜೇಂದ್ರ ಚೋಳನ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಸುಶೀಲಮ್ಮ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT