ಸೋಮವಾರ, ಸೆಪ್ಟೆಂಬರ್ 20, 2021
24 °C

‘ಕೋವಿಡ್ ವೇಳೆ ಶೈಕ್ಷಣಿಕ ಕ್ರಾಂತಿ ನಡೆಯಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೆಹಲಿಯಂತೆ ಕರ್ನಾಟಕ ಸರ್ಕಾರವೂ ಕೋವಿಡ್‌ ಸಂದರ್ಭವನ್ನು ಶೈಕ್ಷಣಿಕ ಕ್ರಾಂತಿಗೆ ಬಳಸಿಕೊಳ್ಳಬೇಕು’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ದೆಹಲಿ ಶಾಸಕಿ ಅತಿಶಿ ಮರ್ಲೆನಾ ಸಲಹೆ ನೀಡಿದರು.

ಎಎಪಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಶೈಕ್ಷಣಿಕ ಸಂವಾದದಲ್ಲಿ ಅವರು ಮಾತನಾಡಿದರು.

‘ಏಳು ವರ್ಷಗಳ ಹಿಂದೆ ಕರ್ನಾಟಕದ ಸರ್ಕಾರಿ ಶಾಲೆಗಳಂತೆಯೇ ದೆಹಲಿ ಶಾಲೆಗಳಿದ್ದವು. ಅಲ್ಲಿಯೂ ಮೂಲ ಸೌಕರ್ಯಗಳು ಇರಲಿಲ್ಲ. ಶಿಕ್ಷಣ ಕ್ರಾಂತಿಗಾಗಿ ಬಜೆಟ್‌ನಲ್ಲಿ ಶೇ 25ರಷ್ಟು ಹಣವನ್ನು ಮೀಸಲಿಟ್ಟು, ಸಮರ್ಪಕವಾಗಿ ಬಳಕೆ ಮಾಡಲಾಯಿತು. ಇದರಿಂದ ಅಲ್ಲಿನ ಶಿಕ್ಷಣ ವ್ಯವಸ್ಥೆಯೇ ಬದಲಾಯಿತು’ ಎಂದರು.

‘ಶಿಕ್ಷಣದಲ್ಲಿ ಬದಲಾವಣೆ ತರಬೇಕೆಂಬ ಇಚ್ಛಾಶಕ್ತಿ ಸರ್ಕಾರಕ್ಕೆ ಇದ್ದರೆ ಸಾಕು. ಕರ್ನಾಟಕ ಸೇರಿದಂತೆ ಹಲವು ರಾಜ್ಯ ಸರ್ಕಾರಗಳಿಗೆ ಶಿಕ್ಷಣ ಆದ್ಯತೆಯ ವಿಷಯವೇ ಆಗಿಲ್ಲ. ಕೋವಿಡ್‌ ನಂತರ ಶಿಕ್ಷಣ ವ್ಯವಸ್ಥೆಯೇ ದೇಶಕ್ಕೆ ಹೆಚ್ಚು ಮಾರಕವಾಗಿದೆ’ ಎಂದು ದೂರಿದರು.

‘ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನೋಡುವ ರೀತಿ ಬದಲಾಗಬೇಕು. ಖಾಸಗಿ ಶಾಲೆಗಳ ಲಾಬಿಗೆ ಮಣಿಯದೆ, ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಹಾಗೂ ಬೋಧನಾ ಗುಣಮಟ್ಟವನ್ನು ಅಭಿವೃದ್ಧಿ ಪಡಿಸಬೇಕು’ ಎಂದು ಒತ್ತಾಯಿಸಿದರು.

ಆಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿರೆಡ್ಡಿ,  ಮುಖಂಡರಾದ ಎಚ್‌.ಡಿ.ಬಸವರಾಜು, ಶಿಕ್ಷಣ ತಜ್ಞ ಗುರುರಾಜ ಕರಜಗಿ, ತಾನ್ಯಾ ಜಯರಾಜ್‌, ಪುಷ್ಪಾ ತಂತ್ರಿ, ಬಿ.ಎಸ್.ಸೂರ್ಯಪ್ರಕಾಶ್‌ ಹಾಗೂ ಇತರರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು