ಸೋಮವಾರ, ಸೆಪ್ಟೆಂಬರ್ 20, 2021
21 °C

ಮುಂದಿನ ಸಿಎಂ ದಲಿತ ಎಂದು ಘೋಷಿಸಲಿ: ಕಾಂಗ್ರೆಸ್‌ಗೆ ಬಿಜೆಪಿ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಲಿತರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಕಾಳಜಿ ಇದ್ದರೆ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ದಲಿತ ಸಮುದಾಯಕ್ಕೆ ಸೇರಿದವರು ಎಂಬುದನ್ನು ಈಗಲೇ ಘೋಷಿಸಲಿ ಎಂದು ಬಿಜೆಪಿ ಸವಾಲು ಹಾಕಿದೆ.

ದಲಿತನೊಬ್ಬ ಮುಖ್ಯಮಂತ್ರಿ ಆಗಬಾರದು ಎಂದು ಜಿ.ಪರಮೇಶ್ವರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಸಿದ್ದರಾಮಯ್ಯ ಈಗ ದಲಿತರ ಬಗ್ಗೆ ಪ್ರೇಮ ತೋರಿಸುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ಬಿಜೆಪಿ ಮುಂದಿನ ಮುಖ್ಯಮಂತ್ರಿಯನ್ನು ದಲಿತ ಸಮುದಾಯಕ್ಕೆ ಸೇರಿದವರನ್ನು ಮಾಡಲಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದೆ. ಸಿದ್ದರಾಮಯ್ಯ ಅವರು ದಲಿತ ಮುಖ್ಯಮಂತ್ರಿ ವಿಚಾರದಲ್ಲಿ ಮಾತನಾಡುವುದೂ ಒಂದೇ, ಗಾಂಧಿ ಕುಡಿಗಳು ಕುಟುಂಬ ರಾಜಕಾರಣದ ಬಗ್ಗೆ ಪ್ರವಚನ ನೀಡುವುದೂ ಒಂದೇ ಎಂದು ವ್ಯಂಗ್ಯವಾಡಿದೆ.

ತಾವೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವಲ್ಲಿ ತರಾತುರಿಯಲ್ಲಿರುವ ಸಿದ್ದರಾಮಯ್ಯ ಅವರು ದಲಿತ ವ್ಯಕ್ತಿಯನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು