ಬೆಂಗಳೂರು: ಉದ್ಯಮಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಅಡಿ ಮಾಜಿ ರೌಡಿಶೀಟರ್ ಬಿ.ಎಂ.ಮಲ್ಲಿಕಾರ್ಜುನ್ ಅಲಿಯಾಸ್ ‘ಫೈಟರ್’ ರವಿ ಹಾಗೂ ಆತನ ಗನ್ಮ್ಯಾನ್ ವಿಜೇಶ್ ಕುಮಾರ್ನನ್ನು ಸದಾಶಿವನಗರ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‘ಇಬ್ಬರೂ ಗನ್ ತೋರಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದರು’ ಎಂದು ಆರೋಪಿಸಿ ಉದ್ಯಮಿ ಸೋಮಶೇಖರ್ ಅವರು ದೂರು ನೀಡಿದ್ದರು. ಆ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು, ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಎರಡು ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಉದ್ಯಮಿ ಸೋಮಶೇಖರ್ ಅವರು ಶ್ರೀಕಾಂತ್ ಎಂಬಾತನಿಗೆ ಸಾಲದ ರೂಪದಲ್ಲಿ ₹75 ಲಕ್ಷ ಕೊಟ್ಟಿದ್ದರು. ಹಣ ಮರಳಿ ಪಡೆಯುವ ಸಲುವಾಗಿ ಆಗಾಗ ಶ್ರೀಕಾಂತ್ನನ್ನು ಸೋಮಶೇಖರ್ ಭೇಟಿ ಮಾಡುತ್ತಿದ್ದರು. ಆಗ ಮಧ್ಯಪ್ರವೇಶಿಸಿದ್ದ ‘ಫೈಟರ್’ ರವಿ, ಶ್ರೀಕಾಂತ್ ಬಳಿ ಹಣ ಕೇಳದಂತೆ ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದ’ ಎಂದು ಪೊಲೀಸರು ಹೇಳಿದರು.

ಕೆಲವು ವರ್ಷಗಳ ಹಿಂದೆ ‘ಫೈಟರ್’ ರವಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಬಯಸಿದ್ದ. ಟಿಕೆಟ್ ಸಿಕ್ಕಿರಲಿಲ್ಲ. ಅದಾದ ಮೇಲೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ. ಹಿಂದೆ ರೌಡಿ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಆರೋಪವೂ ‘ಫೈಟರ್’ ರವಿ ಮೇಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.