ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಬಿ, ಅನಂತನಾಗ್‌ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Published 7 ಜನವರಿ 2024, 20:53 IST
Last Updated 7 ಜನವರಿ 2024, 20:53 IST
ಅಕ್ಷರ ಗಾತ್ರ

ಯಲಹಂಕ: ರೇವಾ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ 2024ನೇ ಸಾಲಿನ ‘ರೇವಾ ಜೀವಮಾನ ಸಾಧನೆ’ ಪ್ರಶಸ್ತಿಯನ್ನು ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್‌ ಹಾಗೂ ನಟ ಅನಂತನಾಗ್‌ ಅವರಿಗೆ ನೀಡಿ ಗೌರವಿಸಲಾಯಿತು.

ನಿರೂಪಕಿ ಅನುಶ್ರೀ ಅವರಿಗೆ ‘ರೇವಾ ಎಕ್ಸಲೆನ್ಸ್‌’ ಪ್ರಶಸ್ತಿಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಂಬಿ ನಾರಾಯಣನ್‌, ‘ಇಸ್ರೊ ಇಂದು ಜಾಗತಿಕ ಮಟ್ಟದಲ್ಲಿ ಇಷ್ಟೊಂದು ಸಾಧನೆ ಮಾಡಲು ವಿಕ್ರಮ್‌ ಸಾರಾಬಾಯಿ, ಡಾ.ಎಪಿಜೆ ಅಬ್ದುಲ್‌ ಕಲಾಂ, ಸತೀಶ್‌ ಧವನ್‌ ಹಾಗೂ ಯು.ಆರ್‌. ರಾವ್‌ ಅವರ ಕೊಡುಗೆ ಅಪಾರವಾಗಿದೆ. ಇವರೆಲ್ಲರೂ ಅದ್ಭುತ ವಿಜ್ಞಾನಿಗಳಾಗುವುದರ ಜೊತೆಗೆ ಉತ್ತಮ ನಾಯಕತ್ವದ ಗುಣಗಳನ್ನು ಹೊಂದಿದ್ದರು’ ಎಂದು ಮೆಲುಕು ಹಾಕಿದರು.

ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿ ಪಿ. ಶ್ಯಾಮರಾಜು ಮಾತನಾಡಿ, ‘ವಿಶ್ವವಿದ್ಯಾಲಯದಲ್ಲಿ ಮೌಲ್ಯಯುತ ಶಿಕ್ಷಣದ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಲು ಶ್ರಮಿಸುತ್ತಿದೆ. ಇಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ದೇಶ–ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ’ ಎಂದು ಹೇಳಿದರು.

ರೇವಾ ವಿಶ್ವವಿದ್ಯಾಲಯದ ಕುಲಪತಿ ಎಂ. ಧನಂಜಯ, ಸಹಕುಲಪತಿ ಉಮೇಶ್‌ ಎಸ್‌. ರಾಜು, ಕುಲಸಚಿವ ಎನ್‌. ರಮೇಶ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT