ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಣ್ಣ ಸಾಂಸ್ಕೃತಿಕ ನಾಯಕ: ಘೋಷಣೆಗೆ ಆಗ್ರಹ

Published 8 ಜನವರಿ 2024, 16:34 IST
Last Updated 8 ಜನವರಿ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಲಿಂಗಾಯತ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.

ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ  ಅಧ್ಯಕ್ಷರಾಗಿರುವ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದೇವರು ಸ್ವಾಮೀಜಿ, ಗದುಗಿನ ತೋಂಟದಾರ್ಯ ಮಠದ ಸಿದ್ದರಾಮ ಸ್ವಾಮೀಜಿ, ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಸೋಮವಾರ ಭೇಟಿಮಾಡಿದ ಲಿಂಗಾಯತ ಹಾಗೂ ವಿವಿಧ ಸಮುದಾಯಗಳ 48 ಮಠಾಧೀಶರ ನಿಯೋಗ, ಈ  ಬೇಡಿಕೆ ಮಂಡಿಸಿತು.

‘ಬಸವಾದಿ ಶರಣರ ಆಶಯಗಳೆಲ್ಲವೂ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ನನ್ನ ತಕರಾರಿಲ್ಲ. ಆದರೆ, ನಾನೊಬ್ಬನೇ ನಿರ್ಧಾರ ಕೈಗೊಳ್ಳಲಾಗದು. ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸಿದ್ದರಾಮಯ್ಯ ನಿಯೋಗಕ್ಕೆ ಭರವಸೆ ನೀಡಿದರು.

ಫಕೀರ ದಿಂಗಾಲೇಶ್ವರ ಸ್ವಾಮೀಜಿ, ರಾಜಶೇಖರ ಶಿವಾಚಾರ್ಯ ಸ್ವಾಮೀಜಿರು, ಚನ್ನಬಸವಾನಂದ ಸ್ವಾಮೀಜಿ,  ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ನಿಯೋಗದಲ್ಲಿದ್ದರು.

ಸಚಿವರಾದ ಎಂ.ಬಿ.ಪಾಟೀಲ, ಈಶ್ವರ ಖಂಡ್ರೆ, ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪಾ, ಲೇಖಕಿಯರಾದ ವಸುಂಧರಾ ಭೂಪತಿ, ಕೆ.ಷರೀಫಾ, ಎಲ್.ಎನ್‌. ಮುಕುಂದರಾಜು, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಮಾವಳ್ಳಿ ಶಂಕರ್, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ ನಿಯೋಗದ ಜತೆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT